ಮಂಡ್ಯ: ಬೀದಿ ಬದಿಯಲ್ಲಿದ್ದ ಹಣ್ಣಿನ ಅಂಗಡಿಗಳು ಸೇರಿದಂತೆ ಇತರೆ ಅಂಗಡಿಗಳು (Shops) ಬೆಂಕಿಯಿಂದ (Fire Accident) ಸುಟ್ಟು ಕರಕಲಾಗಿರುವ ಘಟನೆ ಮಂಡ್ಯದ (Mandya) ಹೊಳಲು ಸರ್ಕಲ್ನಲ್ಲಿ (Holalu Circle) ಜರುಗಿದೆ. ಇಂದು ಬೆಳಗ್ಗಿನ ಜಾವ 3.30ರ ವೇಳೆಯಲ್ಲಿ ಹೊಳಲು ಸರ್ಕಲ್ನಲ್ಲಿ ರಸ್ತೆ ಬದಿಯಲ್ಲಿದ್ದ ಹಣ್ಣಿನ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಪಕ್ಕದಲ್ಲೇ ಇದ್ದ ಮತ್ತೊಂದು ಅಂಗಡಿಗೂ ಈ ಬೆಂಕಿ ವ್ಯಾಪಿಸಿದೆ. ಬೆಂಕಿಯ ತೀವ್ರತೆ ಹೆಚ್ಚಿದ ಕಾರಣ ಎರಡೂ ಅಂಗಡಿಗಳು ಸುಟ್ಟು ಕರಕಲಾಗಿವೆ.
Aishwarya Rai: ಗಂಡನ ಮನೆಯಿಂದ ಹೊರಬಂದ ಐಶ್ವರ್ಯಾ ರೈ..! ಬಿಗ್’ಬಿ ಮನೆಯಲ್ಲಿ ಅತ್ತೆ-ಸೊಸೆಯ ಬಿರುಕು
ಘಟನೆ ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿದ್ದ ಅವಘಡವನ್ನು ತಪ್ಪಿಸಿದ್ದಾರೆ. ಮಹದೇವ, ರಾಧಮ್ಮ ಎಂಬವರಿಗೆ ಸೇರಿದ ಎರಡು ಅಂಗಡಿಗಳು ಸುಟ್ಟು ಕರಕಲಾಗಿವೆ ಎಂದು ತಿಳಿದು ಬಂದಿದೆ. ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಬೆಂಕಿಯ ಕೆನ್ನಾಲೆಗೆ ಸುಟ್ಟು ಕರಕಲಾಗಿರುವ ಅಂಗಡಿಗಳ ಮಾಲೀಕರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.