ಬೆಂಗಳೂರು:- ರಾಜಧಾನಿ ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಗನ್ ತೋರಿಸಿ ಬರೊಬ್ಬರಿ 40 ಲಕ್ಷ ಹಣ ದರೋಡೆ ಮಾಡಿದ ಘಟನೆ ಜರುಗಿದೆ. ಖದೀಮರು, ನೇರವಾಗಿ ಮನೆಗೆ ನುಗ್ಗಿದ್ದಾರೆ. ಬಳಿಕ ಗನ್ ತೋರಿಸಿ ಮನೆಯಲ್ಲಿದ್ದವರಿಗೆ ಹೆದುರಿಸಿ ಕಳ್ಳತನ ಮಾಡಿದ್ದಾರೆ.
Narayana Murthy: ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ..! ಹೇಗೆ ಗೊತ್ತಾ?
ಘಟನೆಯ ಬಳಿಕ ದೂರುದಾರರು ಪೊಲೀಸರಿಗೆ ಮಾಹಿತಿ ನೀಡಿದ್ದು,ಸ್ಥಳಕ್ಕೆ ಕೊಡಿಗೆಹಳ್ಳಿ ಪೊಲೀಸರು ಭೇಟಿ ನೀಡಿದ್ದಾರೆ. ಈ ವೇಳೆ ಸುಮಾರು ನಲವತ್ತು ಲಕ್ಷ ಹಣ ಮನೆಯಲ್ಲಿ ಯಾಕೆ ಇಟ್ಟಿದ್ದರೂ ಎನ್ನುವ ಪ್ರಶ್ನೆ? ಮೂಡಿದೆ. ಸದ್ಯ ದುಷ್ಕರ್ಮಿಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.