ಸಭಾಪತಿ ಹೊರಟ್ಟಿ ಮನೆ ಬಳಿ ದರೋಡೆ ಕೇಸ್‌ ; ಆರೋಪಿಗಳ ಮೇಲೆ ಫೈರಿಂಗ್‌

ಹುಬ್ಬಳ್ಳಿ: ನಗರದಲ್ಲಿ  ಮತ್ತೆ ಪೊಲೀಸರ ಗನ್ ಸದ್ದು ಮಾಡಿದೆ. ಮನೆಯೊಂದರಲ್ಲಿ ದರೋಡೆ ಮಾಡಿದ್ದ ಇಬ್ಬರು ಅಂತರರಾಜ್ಯ ದರೋಡೆಕೋರರ ಮೇಲೆ ಪೊಲೀಸರು ಫೈರಿಂಗ್‌ ನಡೆಸಿದ್ದಾರೆ. ಅಂತರರಾಜ್ಯ ಕಳ್ಳರಾದ ಇರ್ಷಾದ್ ಹಾಗೂ ಅಕ್ಬರ್ ಕಾಲಿಗೆ ಹುಬ್ಬಳ್ಳಿಯ ಉಪನಗರ ಪೊಲೀಸರು ಗುಂಡು ಹಾರಿಸಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿಯವರ ಹುಬ್ಬಳ್ಳಿಯ ನಿವಾಸದ ಬಳಿ ಆರೋಪಿಗಳು ದರೋಡೆ ಮಾಡಿದ್ದರು. ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಫೈರಿಂಗ್‌ ನಡೆಸಿ ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ, ಮೂವರು ಪೊಲೀಸ್ … Continue reading ಸಭಾಪತಿ ಹೊರಟ್ಟಿ ಮನೆ ಬಳಿ ದರೋಡೆ ಕೇಸ್‌ ; ಆರೋಪಿಗಳ ಮೇಲೆ ಫೈರಿಂಗ್‌