ಚಾಂಪಿಯನ್ ಟ್ರೋಫಿಯಲ್ಲಿ ಭಾನುವಾರ ಪಾಕಿಸ್ತಾನ್ ಹಾಗೂ ಭಾರತ ಮುಖಾಮುಖಿಯಾಗಿದ್ದವು. ಇದರಲ್ಲಿ ಭಾರತ ಬದ್ಧ ವೈರಿ ಪಾಕ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ.
ಮಲಗಿದ್ದಾಗ ಬಾಯಲ್ಲಿ ಜೊಲ್ಲು ಬರ್ತಿದ್ರೆ ನಿರ್ಲಕ್ಷ್ಯ ಬೇಡ: ಇದು ಈ ಕಾಯಿಲೆ ಸಂಕೇತ!
ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ರೋಹಿತ್ ಶರ್ಮಾ ಅವರು, ವಿಶ್ವ ದಾಖಲೆ ಮಾಡಿದ್ದಾರೆ. ಪಾಕಿಸ್ತಾನ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಎಂದಿನಂತೆ ಆರಂಭಿಕರಾಗಿ ಕಣಕ್ಕಿಳಿದಿದ್ದ ರೋಹಿತ್ ಹೊಡಿಬಡಿ ಆಟದ ಮೂಲಕ ಪಾಕ್ ಬೌಲರ್ಗಳ ಬೆವರಿಳಿಸಿದರು. ಆದರೆ 20 ರನ್ಗಳಿಗೆ ರೋಹಿತ್ ಇನ್ನಿಂಗ್ಸ್ ಅಂತ್ಯಗೊಂಡಿತು.
ಆದಾಗ್ಯೂ ತಮ್ಮ ಅಲ್ಪ ಇನ್ನಿಂಗ್ಸ್ನಲ್ಲೂ ಏಕದಿನದಲ್ಲಿ ರೋಹಿತ್ ಶರ್ಮಾ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ. 2013 ರಲ್ಲಿ ಸಾಮಾನ್ಯ ಆರಂಭಿಕ ಆಟಗಾರನಾಗಿ ಆಡಲು ಪ್ರಾರಂಭಿಸಿದ ರೋಹಿತ್, ಅಂದಿನಿಂದ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಒಂದರ ನಂತರ ಒಂದರಂತೆ ಅನೇಕ ದೊಡ್ಡ ದಾಖಲೆಗಳನ್ನು ಮಾಡಿದ್ದಾರೆ. ಇದೀಗ ವಿಶೇಷ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ.
ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಖಾತೆ ತೆರೆದ ತಕ್ಷಣ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ನಲ್ಲಿ ಆರಂಭಿಕನಾಗಿ 9000 ರನ್ಗಳನ್ನು ಪೂರ್ಣಗೊಳಿಸಿದ ಸಾಧನೆ ಮಾಡಿದರು. ರೋಹಿತ್ ಕೇವಲ 181 ಇನ್ನಿಂಗ್ಸ್ಗಳಲ್ಲಿ ಏಕದಿನ ಕ್ರಿಕೆಟ್ನಲ್ಲಿ 9000 ರನ್ಗಳ ಗಡಿಯನ್ನು ದಾಟಿದರು. ಈ ಮೂಲಕ ಏಕದಿನದಲ್ಲಿ ಆರಂಭಿಕನಾಗಿ ಅತಿ ಕಡಿಮೆ ಇನ್ನಿಂಗ್ಸ್ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಎಂಬ ವಿಶ್ವದಾಖಲೆ ಬರೆದಿದ್ದಾರೆ.
ರೋಹಿತ್ ಶರ್ಮಾಗೂ ಮೊದಲು ಈ ದಾಖಲೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಅವರು 197 ಇನ್ನಿಂಗ್ಸ್ಗಳಲ್ಲಿ ಆರಂಭಿಕನಾಗಿ 9000 ರನ್ಗಳನ್ನು ಪೂರೈಸಿದ್ದರು. ಈಗ ರೋಹಿತ್ ಶರ್ಮಾ ಈ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.