ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಸತತವಾಗಿ ಅತೀ ಹೆಚ್ಚು ಬಾರಿ ಟಾಸ್ ಸೋತ ಕ್ಯಾಪ್ಟನ್ಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಿದ್ದು, ಈ ಮೂಲಕ ವಿಶ್ವ ದಾಖಲೆ ಬರೆದಿದ್ದಾರೆ.
2023ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಿಂದ ರೋಹಿತ್ ಶರ್ಮಾ ಅವರ ಟಾಸ್ ಸೋಲು ಪ್ರಾರಂಭಗೊಂಡಿತು. ಅದು ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲೂ ಮುಂದುವರೆದಿದೆ. ಈ ಮೂಲಕ ಚಾಂಪಿಯನ್ಸ್ ಟ್ರೋಫಿಯ ಎಲ್ಲಾ ಪಂದ್ಯಗಳಲ್ಲೂ ಟಾಸ್ ಸೋತ ಮೊದಲ ನಾಯಕ ಎನಿಸಿಕೊಂಡಿದ್ದಾರೆ
ಹಾಗೆಯೇ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಸತತ 12 ಬಾರಿ ಟಾಸ್ ಸೋತ ವಿಶ್ವದ 2ನೇ ಕ್ಯಾಪ್ಟನ್ ರೋಹಿತ್ ಶರ್ಮಾ. ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ತಂಡದ ನಾಯಕರಾಗಿದ್ದ ಬ್ರಿಯಾನ್ ಲಾರಾ 1998 – 1999 ರ ನಡುವೆ ಸತತವಾಗಿ 12 ಬಾರಿ ಟಾಸ್ ಸೋತಿದ್ದರು.
ಇದೀಗ ಈ ದಾಖಲೆಯನ್ನು ಸರಿಗಟ್ಟಿ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಸತತವಾಗಿ ಅತೀ ಹೆಚ್ಚು ಬಾರಿ ಟಾಸ್ ಸೋತ ಕ್ಯಾಪ್ಟನ್ ಎಂಬ ಅನಗತ್ಯ ದಾಖಲೆಯೊಂದನ್ನು ಹಿಟ್ಮ್ಯಾನ್ ತಮ್ಮ ಹೆಸರಿಗೆ ಸೇರ್ಪಡೆಗೊಳಿಸಿದ್ದಾರೆ.