ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಣ ಎರಡು ಪಂದ್ಯಗಳ ಟೆಸ್ಟ್ ಸರಣಿ ಗುರುವಾರ (ಸೆ. 19) ಆರಂಭವಾಗಲಿದೆ. ಮೊದಲನೇ ಪಂದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಲವು ಸಂಗತಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ್ ಪೂಜಾರ ಅವರು ಭಾರತ ಟೆಸ್ಟ್ ತಂಡದಿಂದ ಹೊರ ಬಿದ್ದಿದ್ದಾರೆ. ಇವರು ತಂಡಕ್ಕೆ ಮರಳುವುದು ಅನುಮಾನ. ಈ ಹಿನ್ನೆಲೆಯಲ್ಲಿ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಭಾರತ ತಂಡಕ್ಕೆ ಮೂರೂ ಸ್ವರೂಪದಲ್ಲಿ ಆಡಬಲ್ಲ ಯುವ ಪ್ರತಿಭೆಗಳ ಮೇಲೆ ಬಿಸಿಸಿಐ ಆಯ್ಕೆ ಸಮಿತಿ ಕಣ್ಣಿಟ್ಟಿದೆ. ಯಶಸ್ವಿ ಜೈಸ್ವಾಲ್ ಟೆಸ್ಟ್ ತಂಡದಲ್ಲಿ ಈಗಗಲೇ ತಮ್ಮ ಸ್ಥಾನವನ್ನು ಗಟ್ಟಿ ಮಾಡಿಕೊಂಡಿದ್ದಾರೆ. ಅಲ್ಲದೆ ಇಂಗ್ಲೆಂಡ್ ವಿರುದ್ದ ಕಳೆದ ಟೆಸ್ಟ್ ಸರಣಿಯಲ್ಲಿ ಧ್ರುವ್ ಜುರೆಲ್ ಮತ್ತು ಸರ್ಫರಾಝ್ ಖಾನ್ ಅವರು ಭಾರತದ ಪರ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು ಹಾಗೂ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಮೂರೂ ಸ್ವರೂಪದಲ್ಲಿ ರಾಷ್ಟ್ರೀಯ ತಂಡಕ್ಕೆ ಭವಿಷ್ಯದ ಮೂವರು ಸೂಪರ್ ಸ್ಟಾರ್ಗಳನ್ನು ಆರಿಸಿದ್ದಾರೆ. ಅಲ್ಲದೆ ಈ ಮೂವರು ಯುವ ಆಟಗಾರರನ್ನು ಟೀಮ್ ಮ್ಯಾನೇಜ್ಮೆಂಟ್ ಹೆಚ್ಚಿನ ಕಾಳಜಿ ವಹಿಸಲಿದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
“ಪ್ರಾಮಾಣಿಕವಾಗಿ ಹೇಳಬೇಕೆಂದರೆ ಈ ಮೂವರು ಬಗ್ಗೆ ನೀವು ಜಾಸ್ತಿ ಮಾತನಾಡಬೇಕಾದ ಅಗತ್ಯವಿಲ್ಲ. ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ ಮತ್ತು ಸರ್ಫರಾಝ್ ಖಾನ್ ಅವರು ಟೆಸ್ಟ್ ಕ್ರಿಕೆಟ್ಗೆ ತುಂಬಾ ಹೊಸಬರು. ಬ್ಯಾಟಿಂಗ್ನಲ್ಲಿ ಇವರು ಏನು ಮಾಡಬಲ್ಲರೆಂದು ನಮ್ಮೆಲ್ಲರಿಗೂ ತಿಳಿದಿದೆ. ಇನ್ನು ಧ್ರುವ್ ಜುರೆಲ್ ಅವರು ವಿಕೆಟ್ ಕೀಪರ್ ಆಗಿ ಹೇಗೆ ಆಡಲಿದ್ದಾರೆಂಬುದು ವಿಶೇಷವಾಗಿದೆ. ಭಾರತ ತಂಡದ ಮೂರೂ ಸ್ವರೂಪದಲ್ಲಿ ಆಡಬಲ್ಲ ಎಲ್ಲಾ ಸಾಮರ್ಥ್ಯ ಈ ಮೂವರು ಆಟಗಾರರು ಹೊಂದಿದ್ದಾರೆ.