ಬೆಂಗಳೂರು: ಟೀಂ ಇಂಡಿಯಾ (Team India) ಬ್ಯಾಟರ್ಗಳ ಅಬ್ಬರಕ್ಕೆ ವಿಶ್ವದಾಖಲೆಗಳು ನುಚ್ಚುನೂರಾಗುತ್ತಿವೆ. ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ನಲ್ಲಿ (ODI) ಭಾರತದ ಪರ 300ಕ್ಕೂ ಅಧಿಕ ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದ ರೋಹಿತ್ ಶರ್ಮಾ (Rohit Sharma) ಇದೀಗ ಸಿಕ್ಸರ್ನಿಂದಲೇ ಮತ್ತೊಂದು ದಾಖಲೆ ಸಿಡಿಸಿದ್ದಾರೆ.
ಭಾನುವಾರ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆದರ್ಲೆಂಡ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನೊದಲು ಬ್ಯಾಟಿಂಗ್ ಮಾಡಿತು. ಆರಂಭದಿಂದಲೇ ಸಿಕ್ಸರ್, ಬೌಂಡರಿ ಅಬ್ಬರಿಸಿದ ರೋಹಿತ್ ಶರ್ಮಾ 54 ಎಸೆತಗಳಲ್ಲಿ 61 ರನ್ ಬಾರಿಸಿದರು. ಈ ವೇಳೆ 8 ಬೌಂಡರಿ, 4 ಸಿಕ್ಸರ್ಗಳನ್ನೂ ಸಿಡಿಸಿದರು. ಈ ಮೂಲಕ ಕ್ಯಾಲೆಂಡರ್ ವರ್ಷದಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ವಿಶ್ವದ ನಂ.1 ಬ್ಯಾಟರ್ ಎಂಬ ಖ್ಯಾತಿಯನ್ನು ಗಳಿಸಿದ್ದಾರೆ