ಜುಲೈ 27 ರಿಂದ ಶ್ರೀಲಂಕಾ ವಿರುದ್ಧದ ಸರಣಿಯಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ.
ಕರಿಬೇವಿನ ಚಮತ್ಕಾರ ನೀವು ತಿಳಿಯಲೇಬೇಕು: ಕೇವಲ ಒಂದು ಕಡ್ಡಿ ಇಳಿಸುತ್ತೆ ನಿಮ್ಮ ದೇಹದ ತೂಕ!
ಇಬ್ಬರು ಆಟಗಾರರು ವಿಶ್ರಾಂತಿ ಬಯಸಿದ್ದು, ಹೀಗಾಗಿ ಮುಂಬರುವ ಏಕದಿನ ಸರಣಿಯಲ್ಲೂ ಕಾಣಿಸಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿ ಹಿಟ್ಮ್ಯಾನ್ ಹಾಗೂ ಕಿಂಗ್ ಕೊಹ್ಲಿಯ ಕಂಬ್ಯಾಕ್ಗಾಗಿ ಬಾಂಗ್ಲಾದೇಶ್ ವಿರುದ್ಧದ ಸರಣಿಯವರೆಗೂ ಕಾಯಲೇಬೇಕು
ಸದ್ಯ ವಿರಾಟ್ ಕೊಹ್ಲಿ ಲಂಡನ್ನಲ್ಲಿದ್ದರೆ, ರೋಹಿತ್ ಶರ್ಮಾ ಅಮೆರಿಕದಲ್ಲಿದ್ದಾರೆ. ಈ ಇಬ್ಬರು ಶ್ರೀಲಂಕಾ ವಿರುದ್ಧದ ಸರಣಿಯಿಂದ ಹೊರಗುಳಿದರೆ, ಯುವ ಆಟಗಾರರಿಗೆ ಅವಕಾಶ ಸಿಗಲಿದೆ. ಅದರಲ್ಲೂ ಏಕದಿನ ತಂಡದ ನಾಯಕರಾಗಿ ಮುಂದುವರೆದಿರುವ ರೋಹಿತ್ ಶರ್ಮಾ ಅಲಭ್ಯರಾದರೆ, ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಬಹುದು. ಹಾಗೆಯೇ ಟಿ20 ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
ಭಾರತ ಮತ್ತು ಶ್ರೀಲಂಕಾ ನಡುವಣ ಸರಣಿಯು ಜುಲೈ 27 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನಾಡಲಾಗುತ್ತದೆ.
ಜುಲೈ 27 ರಿಂದ ಟಿ20 ಸರಣಿ ಶುರುವಾಗಲಿದ್ದು, ಇದಾದ ಬಳಿಕ ಆಗಸ್ಟ್ 2 ರಿಂದ ಏಕದಿನ ಸರಣಿ ಆರಂಭವಾಗಲಿದೆ. ಅಲ್ಲದೆ ಈ ಸರಣಿಗಾಗಿ ಶೀಘ್ರದಲ್ಲೇ ತಂಡವನ್ನು ಪ್ರಕಟಿಸುವ ಸಾಧ್ಯತೆಯಿದೆ