ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಐಸಿಸಿ ರ್ಯಾಂಕಿಂಗ್ನಲ್ಲಿ ಭಾರೀ ಕುಸಿತ ಕಂಡಿದ್ದಾರೆ.
Tumkur-Yeshwanthpur Train: ತುಮಕೂರು- ಯಶವಂತಪುರ ಮೆಮು ರೈಲು ಸಂಚಾರಕ್ಕೆ ನಾಳೆ ಅಧಿಕೃತ ಚಾಲನೆ!
ಈ ಆಟಗಾರರು, ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಅದರಲ್ಲೂ ಟೆಸ್ಟ್ ಬ್ಯಾಟರ್ಗಳ ಟಾಪ್-10 ಶ್ರೇಯಾಂಕ ಪಟ್ಟಿಯಿಂದ ವಿರಾಟ್ ಕೊಹ್ಲಿ ಹೊರಬಿದ್ದಿದ್ದಾರೆ. ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ಟೆಸ್ಟ್ ಬ್ಯಾಟರ್ಗಳ ರ್ಯಾಂಕಿಂಗ್ನಲ್ಲಿ 5ನೇ ಸ್ಥಾನದಲ್ಲಿದ್ದರು. ಆದರೆ ಚೆನ್ನೈ ಟೆಸ್ಟ್ನ ಮೊದಲ ಇನಿಂಗ್ಸ್ನಲ್ಲಿ 6 ರನ್ ಹಾಗೂ ಎರಡನೇ ಇನಿಂಗ್ಸ್ನಲ್ಲಿ 5 ರನ್ಗಳಿಗೆ ಔಟಾಗಿದ್ದ ಹಿಟ್ಮ್ಯಾನ್ ಇದೀಗ ಟೆಸ್ಟ್ ಬ್ಯಾಟರ್ಗಳ ಶ್ರೇಯಾಂಕದಲ್ಲಿ ಐದು ಸ್ಥಾನ ಕುಸಿತ ಕಂಡಿದ್ದಾರೆ. ಅಲ್ಲದೆ ನೂತನ ರ್ಯಾಕಿಂಗ್ ಪಟ್ಟಿಯಲ್ಲಿ 10ನೇ ಸ್ಥಾನ ಅಲಂಕರಿಸಿದ್ದಾರೆ
ಮತ್ತೊಂದೆಡೆ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ 6 ರನ್ ಬಾರಿಸಿದ್ದ ವಿರಾಟ್ ಕೊಹ್ಲಿ ದ್ವಿತೀಯ ಇನಿಂಗ್ಸ್ನಲ್ಲಿ 17 ರನ್ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇದರ ಪರಿಣಾಮ ಇದೀಗ ಐಸಿಸಿ ಟೆಸ್ಟ್ ಬ್ಯಾಟರ್ಗಳ ಶ್ರೇಯಾಂಕ ಪಟ್ಟಿಯಲ್ಲಿ 12ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದಕ್ಕೂ ಮುನ್ನ ಕಿಂಗ್ ಕೊಹ್ಲಿ 7ನೇ ಸ್ಥಾನದಲ್ಲಿದ್ದರು ಎಂಬುದು ವಿಶೇಷ.
ಇದೀಗ ಟೀಮ್ ಇಂಡಿಯಾ ದಿಗ್ಗಜರಿಬ್ಬರೂ ದ್ವಿತೀಯ ಟೆಸ್ಟ್ ಪಂದ್ಯಕ್ಕಾಗಿ ಸಿದ್ಧತೆಯಲ್ಲಿದ್ದಾರೆ. ಕಾನ್ಪುರದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಮಿಂಚಿದರೆ ಶ್ರೇಯಾಂಕ ಪಟ್ಟಿಯಲ್ಲಿ ಮೇಲೇರಬಹುದು. ಒಂದು ವೇಳೆ ರೋಹಿತ್ ಶರ್ಮಾ ವಿಫಲರಾದರೆ, ಮುಂದಿನ ವಾರ ಅವರು ಸಹ ಟಾಪ್-10 ಪಟ್ಟಿಯಿಂದ ಹೊರಬೀಳಲಿದ್ದಾರೆ.