ಆಸ್ಟ್ರೇಲಿಯಾ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಚಾಂಪಿಯನ್ಸ್ ಫೈನಲ್ಗೆ ಟೀಂ ಇಂಡಿಯಾ ಪ್ರವೇಶಿಸಿದ್ದು ಭಾರತದ ಪರ ರೋಹಿತ್ ಶರ್ಮಾ ದಾಖಲೆ ಬರೆದಿದ್ದಾರೆ.
ಹೆಚ್ಚು ಫೋನ್ ಬಳಸುವವರೇ ಎಚ್ಚರ: ಸಮೀಕ್ಷೆಯಲ್ಲಿ ಶಾಕಿಂಗ್ ಸತ್ಯ ಬಹಿರಂಗ!
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್, ವಿಶ್ವಕಪ್, ಟಿ20, ಚಾಂಪಿಯನ್ಸ್ ಟ್ರೋಫಿ ಫೈನಲ್ವರೆಗೆ ಟೀಂ ಇಂಡಿಯಾವನ್ನು ಮುನ್ನಡೆಸಿದ ಏಕೈಕ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರವಾಗಿದ್ದಾರೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 264 ರನ್ಗಳಿಗೆ ಆಲೌಟ್ ಆಗಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ಭಾರತ 48.1 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 267 ರನ್ ಹೊಡೆಯುವ ಮೂಲಕ ಫೈನಲ್ ಪ್ರವೇಶಿಸಿತು.
ಲಾಹೋರ್ನಲ್ಲಿ ಬುಧವಾರ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ಮಧ್ಯೆ ಎರಡನೇ ಸೆಮಿಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ವಿಜೇತರಾದವರು ಭಾನುವಾರ ದುಬೈ ಮೈದಾನದಲ್ಲೇ ಭಾರತವನ್ನು ಎದುರಿಸಲಿದೆ.