ರಾಕಿಂಗ್ ಸ್ಟಾರ್ ಯಶ್ (Yash) ಅವರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರೋ ಮೂವರು ಅಭಿಮಾನಿಗಳ ಕುಟುಂಬಕ್ಕೆ ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಇದೇ ವೇಳೆ, ಇನ್ಮುಂದೆ ನನ್ನ ಬ್ಯಾನರ್ ಎಲ್ಲೂ ಕಟ್ಟಬೇಡಿ, ಎಲ್ಲಿಯೂ ಕಟೌಟ್ ಹಾಕಬೇಡಿ ಎಂದು ಫ್ಯಾನ್ಸ್ಗೆ ಯಶ್ ಮನವಿ ಮಾಡಿದ್ದಾರೆ.
ಗದಗದ ಸೊರಣಗಿ ಗ್ರಾಮದಲ್ಲಿ ಮೃತರಾಗಿರೋ ಮುರಳಿ, ನವೀನ್, ಹನುಮಂತ ಮೂವರ ಕುಟುಂಬಕ್ಕೂ ಯಶ್ ತೆರಳಿ ಭೇಟಿ ನೀಡಿ ಸಾಂತ್ವನ ಹೇಳಿದ್ದಲ್ಲದೇ ಅವರ ಜೊತೆ ಇರೋದಾಗಿ ಯಶ್ ಭರವಸೆ ನೀಡಿದ್ದಾರೆ. ಅವರ ಕುಟುಂಬಕ್ಕೆ ಏನು ಸಹಾಯ ಬೇಕೋ ಅದನ್ನು ಮಾಡುತ್ತೇನೆ ಎಂದು ಯಶ್ ಮಾತನಾಡಿದ್ದಾರೆ.
ನಿಮ್ಮೊಂದಿಗೆ ನಾನು ಇದ್ದೇನೆ. ಯಾವುದೇ ಕಾರಣಕ್ಕೂ ಆತಂಕ ಬೇಡ ಎಂದಿದ್ದಾರೆ. ಈ ದುರ್ಘಟನೆ ಆಗಬಾರದಿದ್ದು, ನನಗೂ ತುಂಬಾ ದುಃಖ ಆಗಿದೆ ಎಂದು ಯಶ್ ಹೇಳಿದ್ದಾರೆ. ಇನ್ಮುಂದೆ ನನ್ನ ಬ್ಯಾನರ್ ಕಟ್ಟ ಬೇಡಿ, ಎಲ್ಲಿಯೂ ಕಟೌಟ್ಗಳನ್ನು ಹಾಕಬೇಡಿ ಎಂದು ಯಶ್ ಕೋರಿಕೆಯೊಂದನ್ನ ಮುಂದಿಟ್ಟಿದ್ದಾರೆ.