ಕೊಡಗು:ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶ ಕುಶಾಲನಗರ ತಾಲ್ಲೂಕಿನ ಅತ್ತೂರು ಗ್ರಾಮ ಹಾಗೂ ತೆಪ್ಪಗುಂಡಿ ಗ್ರಾಮಗಳಿಗೆ ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಭೋಸರಾಜು ಹಾಗೂ ಕಂದಾಯ ಸಚಿವ ರಾದ ಕೃಷ್ಣ ಭೈರೇಗೌಡ ಅವರು ಜಂಟಿಯಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಹಾನಿಯಾದ ಮನೆಗಳಿಗೆ ಹಾಗೂ ಸ್ವತ್ತುಗಳಿಗೆ ಅಗತ್ಯ ನೀಡುವಂತೆ ಹಾಗೂ ಪ್ರಾಣ ಹಾನಿ ಆಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಇದೆ ಸಂಧರ್ಭದಲ್ಲಿ ಸೂಚಿಸಿದರು.
ಇನ್ನೂ ನದಿಗಳ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಸಚಿವ ಕೃಷ್ಣಭೈರೇಗೌಡ ಗುಡ್ ನ್ಯೂಸ್ ನೀಡಿದ್ದಾರೆ. 2.5 ಲಕ್ಷ ರೂ. ಪರಿಹಾರದ ಜೊತೆಗೆ ಹೊಸ ಮನೆ ಕಟ್ಟಿಸಿಕೊಡುತ್ತೇವೆ. ಈ ಸಂಬಂಧ ಶೀಘ್ರವೇ ನಾವು ಆದೇಶವನ್ನು ಹೊರಡಿಸುತ್ತೇವೆ ಎಂದು ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಹೇಳಿದ್ದಾರೆ.
ಹೌದು ಕೊಡಗು ಜಿಲ್ಲೆಯ ಕುಶಲನಗರಕ್ಕೆ ಇಂದು ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿದ್ದರು. ನಂತರ ಮನೆ ಕಳೆದುಕೊಂಡವರಿಗೆ 2.5 ಲಕ್ಷ ಪರಿಹಾರದ ಜೊತೆಗೆ ಹೊಸ ಮನೆ ಕಟ್ಟಿಸಿ ಕೊಡುತ್ತೇವೆ ಎಂದು ಸಂತ್ರಸ್ತರಿಗೆ ಭರವಸೆ ನೀಡಿದರು.
ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಭೋಸರಾಜು ಹಾಗೂ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಶಾಸಕರಾದ ಡಾ.ಮಂತರ್ ಗೌಡ ಅವರು ಕೊಡಗು ಜಿಲ್ಲೆಯ ಸಿದ್ದಾಪುರ ಹಾಗೂ ನೆಲಹುದಿಕೇರಿ ಯಲ್ಲಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು.