ಬೆಂಗಳೂರು: ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ (Paris Olympics 2024) ಚಿನ್ನದ ಪದಕ ಗಳಿಸುವ ಕ್ರೀಡಾಪಟುಗಳಿಗೆ 6 ಕೋಟಿ ರೂ., ಬೆಳ್ಳಿ ಪದಕ ಪಡೆಯುವ ಕ್ರೀಡಾಪಟುಗಳಿಗೆ 4 ಕೋಟಿ ರೂ. ಹಾಗೂ ಕಂಚಿನ ಪದಕ ಪಡೆಯುವ ಕ್ರೀಡಾಪಟುಗಳಿಗೆ 03 ಕೋಟಿ ರೂ. ಪ್ರೋತ್ಸಾಹಧನ ಘೋಷಣೆ.
ಭಾರತದಲ್ಲೇ ಈ ಬಾರೀ IPL : ಊಹಾಪೋಹಗಳಿಗೆ ತೆರೆ ಎಳೆದ ಮುಖ್ಯಸ್ಥ ಅರುಣ್ ಧುಮಾಲ್
ಇದೇ 2024ರ ಜುಲೈ 26ರಿಂದ ಆಗಸ್ಟ್ 11ರ ವರೆಗೆ ಪ್ಯಾರಿಸ್ನಲ್ಲಿ ಒಲಿಂಪಿಕ್ಸ್ ಕ್ರೀಡಾಹಬ್ಬ ನಡೆಯಲಿದೆ. ಕ್ರೀಡೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ನಲ್ಲಿ ಪ್ರೋತ್ಸಾಹ ಧನ ಘೋಷಣೆ ಮಾಡಲಾಗಿದೆ.
ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗಳಿಸುವ ಕ್ರೀಡಾಪಟುಗಳಿಗೆ 6 ಕೋಟಿ ರೂ., ಬೆಳ್ಳಿ ಪದಕ ಪಡೆಯುವ ಕ್ರೀಡಾಪಟುಗಳಿಗೆ 4 ಕೋಟಿ ರೂ. ಹಾಗೂ ಕಂಚಿನ ಪದಕ ಪಡೆಯುವ ಕ್ರೀಡಾಪಟುಗಳಿಗೆ 03 ಕೋಟಿ ರೂ. ಪ್ರೋತ್ಸಾಹಧನ ಘೋಷಣೆ.
• ಏಷ್ಯನ್ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕ ವಿಜೇತ ಕ್ರೀಡಾಪಟುಗಳಿಗೆ 35 ಲಕ್ಷ ರೂ., ಬೆಳ್ಳಿ ಪದಕ ವಿಜೇತ ಕ್ರೀಡಾಪಟುಗಳಿಗೆ 25 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತ ಕ್ರೀಡಾಪಟುಗಳಿಗೆ 15 ಲಕ್ಷ ರೂ. ಪ್ರೋತ್ಸಾಹಧನ ನೀಡಲು ಕ್ರಮ.
* ರಾಜ್ಯದ 14 ಸ್ಥಳಗಳಲ್ಲಿ ಮುಂದಿನ ಎರಡು ವರ್ಷದೊಳಗೆ 35 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯ, ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ವಸತಿ ನಿಲಯ ಕಟ್ಟಡ ನಿರ್ಮಾಣ ಹಾಗೂ 10 ಕೋಟಿ ರೂ. ವೆಚ್ಚದಲ್ಲಿ ಬಳ್ಳಾರಿಯಲ್ಲಿ ಕ್ರೀಡಾ ವಸತಿ ನಿಲಯದ ಉನ್ನತೀಕರಣ ಹಾಗೂ ಕ್ರೀಡಾ ಸೌಕರ್ಯಗಳ ಅಭಿವೃದ್ಧಿಗೆ ಕ್ರಮ.