ನವದೆಹಲಿ: ಬಿ.ಆರ್.ಅಂಬೇಡ್ಕರ್ ವಿಚಾರ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಸಂಸತ್ತಿನ ಆವರಣದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಗಾಯಗೊಂಡಿದ್ದಾರೆ. ಈ ವೇಳೆ ರಾಹುಲ್ ಗಾಂಧಿಯೇ ನನ್ನನ್ನು ತಳ್ಳಿದ್ದು ಎಂದು ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಆರೋಪಿಸಿದ್ದಾರೆ. ಕಾಂಗ್ರೆಸ್ ಪ್ರತಿಭಟನೆ ವಿರೋಧಿಸಿ ಬಿಜೆಪಿ ಸದಸ್ಯರು ಪ್ರತಿಭಟಿಸುತ್ತಿದ್ದ ವೇಳೆ ಪ್ರತಾಪ್ ಸಾರಂಗಿ ಅವರನ್ನು ರಾಹುಲ್ ಗಾಂಧಿ ತಳ್ಳಿದ್ದು,
ಅಪ್ಪಿತಪ್ಪಿಯೂ ಈ ಆಹಾರಗಳ ಜೊತೆ ಬಾಳೆಹಣ್ಣು ತಿನ್ನಬೇಡಿ: ತಿಂದ್ರೆ ಆರೋಗ್ಯಕ್ಕೆ ತುಂಬಾ ಡೇಂಜರ್!
ಸಾರಂಗಿ ಕುಸಿದು ಬಿದ್ದಿದ್ದಾರೆ ಎಂದು ಆರೋಪಿಸಿದ್ದಾರೆ. ಸದ್ಯ ಪ್ರತಿಭಟನೆ ವೇಳೆ ಗಾಯಗೊಂಡ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಅವರಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ. ಸಿ.ಎನ್ ಮಂಜುನಾಥ್ ಅವರು ಚಿಕಿತ್ಸೆ ನೀಡಿದ್ದಾರೆ. ಬಳಿಕ ಅವರನ್ನ ದೆಹಲಿಯ ಆರ್ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಜೆಪಿ vs ಕಾಂಗ್ರೆಸ್ ಪ್ರೊಟೆಸ್ಟ್:
ಚಳಿಗಾಲದ ಅಧಿವೇಶನದಲ್ಲಿ ʻಸಂವಿಧಾನʼ ಕುರಿತ ಚರ್ಚೆ ವೇಳೆ ರಾಜ್ಯಸಭೆಯಲ್ಲಿ ಅಮಿತ್ ಶಾ ಅವರು ಮಾತನಾಡುತ್ತಾ, ʻಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಇದೊಂದು ಫ್ಯಾಷನ್ ಆಗಿಬಿಟ್ಟಿದೆ. ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಅವರಿಗೆ ಸ್ವರ್ಗದಲ್ಲಿ ಸ್ಥಾನವಾದರೂ ಸಿಗುತ್ತಿತ್ತುʼ ಎಂದು ಹೇಳಿದ್ದರು.
ಈ ಕುರಿತ ವೀಡಿಯೋಗಳನ್ನು ವಿಕ್ಷ ನಾಯಕರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಕೇಂದ್ರ ಗೃಹ ಸಚಿವರು ರಾಜೀನಾಮೇ ನೀಡಬೇಕು, ಅಂಬೇಡ್ಕರ್ ವಿರುದ್ಧದ ಟೀಕೆಗೆ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ನಡುವೆ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.