ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿಯವರ ಸಾರಥ್ಯದಲ್ಲಿ ಶಾಸ್ತ್ರೋಕ್ತವಾಗಿ ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಯಾಗಿದೆ . ಇದಾದ ಬಳಿಕ ಸಾವರ್ಜನಿಕರ ದರ್ಶನಕ್ಕೆ ಅನುಮತಿ ನೀಡಲಾಯಿತು. ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾನ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದ ಕಾರಣ, ನೂಕುನುಗ್ಗಲು ಉಂಟಾಗಿದ್ದು, ಮಂದಿರದ ಬಾಗಿಲನ್ನು ಮುಚ್ಚಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಭಾರತದ ಪ್ರಮುಖ ರಾಜಕಾರಣಿಗಳು,
ಕ್ರೀಡಾಪಟುಗಳು, ಉದ್ಯಮಿಗಳು ಮತ್ತು ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಜನವರಿ 22 ರಂದು ಆಯೋಜಿಸಲಾದ ಭವ್ಯವಾದ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ಅಯೋಧ್ಯೆ ರಾಮಮಂದಿರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ ಬೆಳಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿರುವ ಕಾರಣ ರಾಮ ಮಂದಿರದ ಬಾಗಿಲನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.