ತಿರುವನಂತಪುರಂ:- ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಇಂದಿನಿಂದ ಆರಂಭವಾಗಲಿದೆ.
ಅಂದಿನ ಬೇಬಿ ಶಾಮಿಲಿ ಈಗ ಎಲ್ಲಿದ್ದಾರೆ, ಏನ್ಮಾಡ್ತಿದ್ದಾರೆ? ವೃತ್ತಿ ಏನು!?
ಇಂದಿನಿಂದ ಡಿ.25 ರವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ದರ್ಶನ ಅವಧಿಯನ್ನು 18 ಗಂಟೆಗೆ ವಿಸ್ತರಿಸಲಾಗಿದ್ದು, ಪ್ರತಿ ನಿತ್ಯ 70,000 ಜನರಿಗೆ ದರ್ಶನ ಅವಕಾಶ ನೀಡುವಂತೆ ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ. ಜೊತೆಗೆ ಜನಸಂದಣಿ ಹೆಚ್ಚಾದಲ್ಲಿ ಸಮಯವನ್ನು ಅರ್ಧಗಂಟೆ ವಿಸ್ತರಿಸುವಂತೆ ಚಿಂತಿಸಿದೆ.
ಸುಮಾರು 60,000 ಜನರು ವರ್ಚುವಲ್ ಸರತಿ ವ್ಯವಸ್ಥೆಯ ಮೂಲಕ ದರ್ಶನವನ್ನು ಪಡೆಯುತ್ತಾರೆ. ಇನ್ನೂ 10,000 ಜನರು ಸ್ಥಳದಲ್ಲೇ ಬುಕ್ಕಿಂಗ್ ಮಾಡಲು ಅನುಮತಿಸಲಾಗಿದೆ.
ಇನ್ನೂ ಈ ಕುರಿತು ಶಬರಿಮಲೆ ದೇವಸ್ಥಾನ ಮಂಡಳಿ ಅಧ್ಯಕ್ಷ ಪಿ.ಎಸ್.ಪ್ರಶಾಂತ್ ಮಾತನಾಡಿ, ತೀರ್ಥೋದ್ಭವದ ಆರಂಭದಿಂದ ಪ್ರತಿದಿನ ಬೆಳಗ್ಗೆ 3 ರಿಂದ ಮಧ್ಯಾಹ್ನ 1 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ರಾತ್ರಿ 11 ರವರೆಗೆ ದರ್ಶನಕ್ಕೆ ನೀಡಲಾಗುವುದು. ಇದರಿಂದಾಗಿ ಭಕ್ತರ ನುಕುನುಗ್ಗಲನ್ನು ಕಡಿಮೆಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದ್ದಾರೆ.