ಬೆಂಗಳೂರು:-; ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ವಿಪಕ್ಷಗಳು ಪ್ರಿಯಾಂಕ ಖರ್ಗೆ ಅವರ ರಾಜೀನಾಮೆಗೆ ಆಗ್ರಹಿಸಿದೆ.
ಈ ವಿಚಾರವಾಗಿ ಮಾತನಾಡಿದ ಪ್ರಿಯಾಂಕ ಖರ್ಗೆ, ಯಾರೆಷ್ಟೇ ಚೀರಾಡಲಿ, ಬೇಕಿದ್ದರೆ ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದರು.
ನನ್ನ ರಾಜೀನಾಮೆ ಕೇಳಲು ವಿಜಯೇಂದ್ರಾ ಸುಪ್ರೀಂಕೋರ್ಟಾ? ರಾಜು ಕಪನೂರ್ ನನ್ನ ಆಪ್ತ ಅಲ್ಲ ಎಂದು ನಾನು ಹೇಳಿಯೇ ಇಲ್ಲ. ರಾಜು ಕಪನೂರು ಕಾಂಗ್ರೆಸ್ ಸೇರುವ ಮೊದಲು ಬಿಜೆಪಿಯಲ್ಲಿದ್ದರು, ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷರಾಗಿದ್ದರು ಎಂದರು.
ವಿಜಯೇಂದ್ರ ವಿರುದ್ಧ ಮನಿ ಲ್ಯಾಂಡರಿಂಗ್ ಕೇಸ್ ದಾಖಲಾಗಿದೆ, ವಿಜಯೇಂದ್ರ ಯಾಕೆ ರಾಜೀನಾಮೆ ಕೊಡುತ್ತಿಲ್ಲ ಎಂದು ಪ್ರಶ್ನಿಸಿದರು. ಕಲಬುರಗಿ ಮುತ್ತಿಗೆಗೆ ಎಷ್ಟು ಜನ ಬರ್ತೀರಿ ಅಂತಾ ಮೊದಲೇ ಹೇಳಿ, ಅಷ್ಟು ಜನರಿಗೆ ಟೀ ವ್ಯವಸ್ಥೆ ಮಾಡ್ತೇವೆ, ಇಲ್ಲದಿದ್ದರೆ ನೀರನ್ನೂ ಕೊಟ್ಟಿಲ್ಲ ಅಂತಾ ಪ್ರತಿಭಟನೆ ಮಾಡ್ತೀರಾ ಎಂದು ಹೇಳಿದರು.