ಚಿತ್ರದುರ್ಗ:- ಜ.4ಕ್ಕೆ ಕಲಬುರಗಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಸಾರಿಗೆ ಬಸ್ ಪ್ರಯಾಣ ದರ ಶೇಕಡಾ 15 ರಷ್ಟು ಏರಿಕೆ!? ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?
ಈ ಸಂಬಂಧ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರಿಗಳು, ನೌಕರರ ಸರಣಿ ಆತ್ಮಹತ್ಯೆ ಹಿನ್ನೆಲೆ ಜ.4ಕ್ಕೆ ಕಲಬುರಗಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು.
ಡೆತ್ ನೋಟ್ನಲ್ಲಿ ಇನ್ನೂ ನಾಲ್ವರಿಗೆ ಸುಪಾರಿ ಬಗ್ಗೆ ಪ್ರಸ್ತಾಪವಿದೆ. ಮಹಾರಾಷ್ಟ್ರದ ಸುಪಾರಿ ಕಿಲ್ಲರ್ಸ್ಗೆ ಸುಪಾರಿ ಬಗ್ಗೆ ಮಾಹಿತಿ ಹಿನ್ನೆಲೆ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.
ಠಾಣೆಗೆ ದೂರು ನೀಡಲು ಹೋದರೆ ಪ್ರಕರಣ ದಾಖಲಿಸಿಕೊಳ್ಳುತ್ತಿಲ್ಲ. ಸಿಎಂ, ಸಚಿವರು, ರಾಜ್ಯ ಸರ್ಕಾರದಿಂದ ಭಂಡತನ ಪ್ರದರ್ಶನವಾಗುತ್ತಿದೆ. ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು. ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಹೆಸರು ಬರೆದಿಟ್ಟು ಆತ್ಮಹತ್ಯೆ ಪ್ರಕರಣದ ಬಗ್ಗೆ ಸಮರ್ಪಕ ತನಿಖೆ ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.