ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆತಿದೆ, ಕಲ್ಬುರ್ಗಿಯಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರತಿಭಟನೆಯ ಕಾವು ಜೋರಾಗ್ತಿದೆ. ಈ ಮಧ್ಯೆ ರಾಜಕೀಯ ಟಾಕ್ ವಾರ್ ಜೋರಾಗ್ತಿದ್ದು ಬಿಜೆಪಿ ನಾಯಕರು ತಮ್ಮ ಪಟ್ಟು ಬಿಡದೆ ಪ್ರಿಯಾಂಕ್ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣ ಮುಚ್ಚಿ ಹಾಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿದೆ ಎಂದು ಎಂದು ಸಚಿನ್ ಸಹೋದರಿ ಸುರೇಖಾ ಆರೋಪಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯುತ್ತೇನೆ ಎಂದು ಹೇಳಿದ್ದಾರೆ.
Chanakya Niti: ನಿಮಗಿರುವ ಕಷ್ಟಗಳನ್ನು ಎದುರಿಸಲು ಚಾಣಕ್ಯ ಹೇಳಿದ ಈ 10 ವಿಷಯಗಳನ್ನು ನೆನಪಿಡಿ ಸಾಕು.!
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಗಾಂವ್ನಲಿ ಮಾತನಾಡಿದ ಸುರೇಖಾ, ಕಲಬುರಗಿಯಲ್ಲಿ ಸಚಿನ್ ಕೆಲಸ ಮಾಡಿಲ್ಲ. ಆತ ನಮ್ಮ ಭೇಟಿಯೇ ಆಗಿಲ್ಲ. ಸಚಿನ್ ಕೈ ಬರಹವೇ ಅದಲ್ಲ. ಸಚಿನ್ ಹುಟ್ಟಿಯೇ ಇಲ್ಲ ಎಂದು ಅವರು (ರಾಜ್ಯ ಸರ್ಕಾರ) ಮಾಡಿಬಿಡುತ್ತಾರೆ ಎಂಬ ಆತಂಕ ಇದೆ. ರಾಜ್ಯ ಸರ್ಕಾರದ ಮೇಲೆ ನಮಗೆ ನಂಬಿಕೆ ಉಳಿದಿಲ್ಲ. ಸಿಬಿಐ ತನಿಖೆ ಮಾಡಿದರೆ ನ್ಯಾಯ ಸಿಗಬಹುದು ಎಂಬ ವಿಶ್ವಾಸವಿದೆ ಎಂದರು.
ಡೆತ್ ನೋಟ್ನಲ್ಲಿ ಉಲ್ಲೇಖವಾದ ಆರೋಪಿಗಳನ್ನು ಈವರೆಗೆ ತನಿಖೆಗೆ ಒಳಪಡಿಸಿಲ್ಲ. ತನಿಖಾಧಿಕಾರಿಗಳು ನಮ್ಮನ್ನು ಮಾತ್ರ ವಿಚಾರಣೆ ಮಾಡುತ್ತಿದ್ದಾರೆ. ಇಲ್ಲಿವರೆಗೆ ತನಿಖಾಧಿಕಾರಿಗಳು ಯಾವುದೇ ಮಾಹಿತಿ ಕೊಟ್ಟಿಲ್ಲ. ಎಫ್ಎಸ್ಎಲ್ ವರದಿ, ಮರಣೋತ್ತರ ಪರೀಕ್ಷೆ ವರದಿ ಬಗ್ಗೆ ನಮಗೆ ಮಾಹಿತಿ ನೀಡಿಲ್ಲ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೂ ಪತ್ರ ಬರೆಯಲು ಪ್ರಯತ್ನಿಸುತ್ತೇವೆ ಎಂದು ಸುರೇಖಾ ಹೇಳಿದ್ದಾರೆ.