ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಸಾಹಿತಿ ಚಂದ್ರ ಶೇಖರ ಪಾಟೀಲ್ ಅವರ ಅಂತ್ಯಕ್ರಿಯೆ ನೆರವೆರಿಸಲಾಯಿತು. ಚಂದ್ರಶೇಖರ ಪಾಟೀಲ್, ಕನ್ನಡ ನಾಡು-ನುಡಿ, ಸಂಸ್ಕೃತಿ ರಕ್ಷಣೆಗೆ ಹೋರಾಡಿದ್ದರು. ಹಲವು ಪ್ರಶಸ್ತಿಗೆ ಭಾಜನರಾಗಿದ್ದರು. ಇವರಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ,
ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರುನಾಡ ಭೂಷಣ ಪ್ರಶಸ್ತಿ, 2018ನೇ ಸಾಲಿನಲ್ಲಿ ಬಸವಶ್ರೀ ಪ್ರಶಸ್ತಿ ಲಭಿಸಿದೆ. ಇವರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಆದರೆ ಇಂದು ದುರದೃಷ್ಟಕರ ನಮ್ಮನ್ನೆಲ್ಲಾ ಅಗಲಿದ್ದಾರೆ. ಇನ್ನು ವೀರಶೈವ ಸಂಪ್ರದಾಯದಂತೆ ಸಾಹಿತಿ ಚಂಪಾ ಅಂತ್ಯಸಂಸ್ಕಾರ ಮಾಡಲಾಗಿದೆ. ಪೊಲೀಸ್ ಬ್ಯಾಂಡ್ನೊಂದಿಗೆ ರಾಷ್ಟ್ರಗೀತೆ ನುಡಿಸಿ ಗೌರವ ಸಮರ್ಪಣೆ ಮಾಡಲಾಗಿದೆ.
