ಮುಂಬೈ: ಸೈಫ್ ಅಲಿ ಖಾನ್ ಚಾಕು ಇರಿತ ಪ್ರಕರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈಗಾಗಲೇ ಪ್ರಕರಣದ ತನಿಖೆಗೆ ಏಳು ತಂಡಗಳನ್ನು ರಚಿಸಲಾಗಿದೆ. ಚಾಕು ಇರಿದವನ ಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಅವರ ಆರೋಗ್ಯ ಇನ್ನೂ ಸ್ಥಿರವಾಗಿಲ್ಲ ಎನ್ನಲಾಗುತ್ತಿದೆ. ಇದೆಲ್ಲದರ ನಡುವೆ ಪ್ರಕರಣದ ಸಂಬಂಧ ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಕಳ್ಳ ಈಗ ಬಂಧನಕ್ಕೆ ಒಳಗಾಗಿದ್ದಾನೆ.
ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆತನನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಅತ್ತ ಸೈಫ್ ಅಲಿ ಖಾನ್ ಅವರು ಹಲ್ಲೆಗೆ ಒಳಗಾಗಿರುವುದರಿಂದ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದಾರೆ. ಅವರು ಚೇತರಿಸಿಕೊಳ್ಳುವ ಹಂತದಲ್ಲಿ ಇದ್ದಾರೆ.
ಚಳಿಗಾಲ ಮಾತ್ರವಲ್ಲ, ಬೇಸಿಗೆಯಲ್ಲೂ ಹಿಮ್ಮಡಿ ಒಡೆಯುತ್ತಾ..? ಕಾರಣವೇನು..? ಪರಿಹಾರಗಳು ಇಲ್ಲಿದೆ ನೋಡಿ
ಈಗ, ವರದಿಯೊಂದು ನಟ ತನ್ನ ನಟ-ಪತ್ನಿ ಕರೀನಾ ಕಪೂರ್ ಖಾನ್ ಮತ್ತು ಮಕ್ಕಳಾದ ತೈಮೂರ್ ಮತ್ತು ಜೆಹ್ ಅವರೊಂದಿಗೆ ಉಳಿದುಕೊಂಡಿರುವ ಕ್ವಾಡ್ರಪ್ಲೆಕ್ಸ್ನಲ್ಲಿ ಒಳಗೆ ಅಥವಾ ಹೊರಗೆ ಯಾವುದೇ ಕಣ್ಗಾವಲು ಕ್ಯಾಮೆರಾಗಳಿಲ್ಲ. ಇದರಿಂದ ಒಳನುಗ್ಗಿದವರ ಚಲನವಲನಗಳನ್ನು ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ ಎಂಬ ಮಾಹಿತಿಯೂ ಇದೆ ಎನ್ನಲಾಗಿದೆ.