ಬೆಂಗಳೂರು:- ಅತಿಥಿ ಉಪನ್ಯಾಸಕರ ವೇತನ 5 ಸಾವಿರ ಏರಿಕೆ ಆಗಿದ್ದು, ಜ. 1ರಿಂದ ಅನ್ವಯವಾಗುವಂತೆ ಜಾರಿಗೆ ತರಲು ನಿರ್ಧರಿಸಲಾಗಿದೆ.
ಸೇವೆ ಖಾಯಂ ಗೊಳಿಸುವಂತೆ ರಾಜ್ಯವ್ಯಾಪಿ ಮುಷ್ಕರ ನಡೆಸುತ್ತಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಜತೆಗೆ ರಾಜ್ಯ ಸರಕಾರ ಸಂಧಾನಕ್ಕೆ ಮುಂದಾಗಿದೆ. ಜ. 1ರಿಂದ ಅನ್ವಯವಾಗುವಂತೆ ಹಾಲಿ ಇರುವ ಗೌರವಧನವನ್ನು 5 ಸಾವಿರ ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ.
ವಿದ್ಯಾರ್ಹತೆ, ಅನುಭವದ ಆಧಾರದ ಮೇಲೆ ಅತಿಥಿ ಉಪನ್ಯಾಸಕರ ಗೌರವಧನ 26 ಸಾವಿರ ದಿಂದ 31 ಸಾವಿರ ರೂ.ವರೆಗೆ ಇದೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 10,600 ಅತಿಥಿ ಉಪನ್ಯಾಸಕರಿಗೂ ವೇತನ ಹೆಚ್ಚಳದ ಪ್ರಯೋ ಜನ ಸಮಾನವಾಗಿ ದೊರಕಲಿದೆ. ರಾಜ್ಯದ ಬೊಕ್ಕಸಕ್ಕೆ ಇದರಿಂದ ವಾರ್ಷಿಕ 55 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ ಎಂದು MC ಸುಧಾಕರ್ ಹೇಳಿದ್ದಾರೆ.