ಬೆಂಗಳೂರು: ಹೊಸವರ್ಷದ ಆಚರಣೆಗೆ ದಿನಗಣನೆ ಶುರುವಾಗಿದ್ದು, ಈ ಬೆನ್ನಲ್ಲೇ ಬೆಂಗಳೂರಿನ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾ ಚರಣೆ ನಡೆಸಿದ್ದಾರೆ. ನಗರದ ಬಾಗಲೂರಿನ ಮನೆಯೊಂದರಲ್ಲಿ ವಾಸವಾಗಿದ್ದ ಡ್ರಗ್ ಪೆಡ್ಲರ್ ಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ ಆಗಿದ್ದಾರೆ. ಅಲ್ಲದೇ ಈ ಮೂವರು ಆರೋಪಿಗಳು ನೈಜೀರಿಯನ್ ಮೂಲದವರು ಎಂದು ಹೇಳಲಾಗಿದ್ದು,
ಪಾರ್ಟಿಗಳಲ್ಲಿ ಸರಬರಾಜು ಮಾಡಲು ಮಾದಕವಸ್ತುಗಳನ್ನು ಶೇಖರಣೆ ಮಾಡಿದ್ದರು ಎಂದು ಹೇಳಲಾಗಿದೆ. ಸದ್ಯ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ 80 ಲಕ್ಷದ ಕೋಕೆನ್, ಹ್ಯಾಶ್ ಆಯಿಲ್, ಕೋಕೆನ್, ಎಂಡಿಎಂಎ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಸದ್ಯ ಈ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
