ಬಾಲಿವುಡ್ (Bollywood) ಖ್ಯಾತ ನಟ ಸಲ್ಮಾನ್ ಖಾನ್ ಕಿರಿಯ ಸಹೋದರ ಅರ್ಬಾಜ್ ಖಾನ್ (Arbaaz Khan) ಮದುವೆ ಇದೇ ಡಿಸೆಂಬರ್ 24ರಂದು ನಡೆಯಲಿದೆ. ಮೇಕಪ್ ಆರ್ಟಿಸ್ಟ್ ಶುರಾ ಖಾನ್ (Shura Khan) ಜೊತೆ ಅರ್ಬಾಜ್ ಮದುವೆ (Marriage) ನಡೆಯಲಿದ್ದು, ಮುಂಬೈನಲ್ಲಿರುವ ಕುಟುಂಬದ ಸದಸ್ಯರು ಮತ್ತು ಆತ್ಮೀಯರಿಗೆ ಮಾತ್ರ ಆಹ್ವಾನ ನೀಡಲಾಗಿದೆ.
ಮಲೈಕಾ ಅರೋರಾ ಜೊತೆ ಅರ್ಬಾಜ್ 1998ರಲ್ಲಿ ಮದುವೆ ಆಗಿದ್ದರು. ನಂತರ ಇಬ್ಬರೂ ಡಿವೋರ್ಸ್ ಪಡೆದುಕೊಂಡು ದೂರವಾದರು. 19 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದ ಮಲೈಕಾ ಮತ್ತು ಅರ್ಬಾಜ್ ಅವರಿಗೆ ಒಬ್ಬ ಮಗ ಕೂಡ ಇದ್ದಾನೆ. ನಂತರ ಅರ್ಬಾಜ್ ರೂಪದರ್ಶಿ ಜಾರ್ಜಿಯಾ ಜೊತೆ ಡೇಟ್ ಮಾಡುತ್ತಿದ್ದರು. ಆ ಸಂಬಂಧವೂ ಮುರಿದು ಬಿದ್ದಿದೆ.
ಒಂಟಿಯಾಗಿ ಜೀವನ ನಡೆಸುತ್ತಿದ್ದ ಅರ್ಬಾಜ್ ಖಾನ್ ಇದೀಗ ಮೇಕಪ್ ಕಲಾವಿದೆ ಜೊತೆ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅರ್ಬಾಜ್ ಖಾನ್ ಅವರಿಗೂ ಮತ್ತು ಶುರಾ ಖಾನ್ ಅವರ ವಯಸ್ಸಿನ ಅಂತ ಬರೋಬ್ಬರಿ 22 ವರ್ಷ ಎಂದು ಹೇಳಲಾಗುತ್ತಿದೆ.