ಸ್ಯಾಂಡಲ್ವುಡ್ ನಟಿ ಪೂಜಾ ಗಾಂಧಿ (Pooja Gandhi) ದಂಪತಿ ಉಡುಪಿಗೆ ಆಗಮಿಸಿದ್ದಾರೆ. ಪತಿ ವಿಜಯ್ ಘೋರ್ಪಡೆ (Vijay Ghorpade) ಜೊತೆ ನಟಿ ಪೂಜಾ ಗಾಂಧಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಮದುವೆ ಆದ ನಂತರ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಪೂಜಾ ಗಾಂಧಿ ದಂಪತಿ, ಕನಕ ನವಗ್ರಹ ಕಿಂಡಿಯ ಮೂಲಕ ದೇವರ ದರ್ಶನ ಮಾಡಿದ್ದಾರೆ. ರಥಬೀದಿಯಲ್ಲಿರುವ ಕಾಣಿಯೂರು ಮಠಕ್ಕೆ ತೆರಳಿ ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರನ್ನು ಭೇಟಿಯಾಗಿದ್ದು, ಸ್ವಾಮೀಜಿಯವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕಾರ ಮಾಡಿದ್ದಾರೆ. ಶ್ರೀಕೃಷ್ಣಮಠ ಮತ್ತು ಕಾಣಿಯೂರು ಮಠ ನವ ದಂಪತಿಯನ್ನು ಗೌರವಿಸಿದೆ
ನವೆಂಬರ್ 29ರಂದು ಉದ್ಯಮಿ ವಿಜಯ್ ಘೋರ್ಪಡೆ ಜೊತೆ ಪೂಜಾ ಗಾಂಧಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂತ್ರ- ಮಾಂಗಲ್ಯ ಪದ್ಧತಿಯಲ್ಲಿ ಸರಳವಾಗಿ ಪೂಜಾ ಮದುವೆಯಾಗಿದ್ದಾರೆ.