ತುಮಕೂರು: ಸಿಗ್ನಲ್ ನಲ್ಲಿ ನಿಂತಿದ್ದ KSRTC ಬಸ್’ಗೆ ಸ್ಯಾಂಟ್ರೋ ಕಾರು ಗುದ್ದಿದ ಪರಿಣಾಮ ಹಲವರಿಗೆ ಗಾಯಗಳಾಗಿರುವ ಘಟನೆ ತುಮಕೂರಿನ ಡಾ.ಶಿವಕುಮಾರ ಸ್ವಾಮೀಜಿ ಸರ್ಕಲ್ ಬಳಿ ನಡೆದಿದೆ. ಮೂರು ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸರಣಿ ಅಪಘಾತದಿಂದಾಗಿ ಕೆಲ ಕಾಲ ಟ್ರಾಫಿಕ್ ಜಾಮ್ ಆದ ಘಟನೆಯೂ ನಡೆದಿದೆ.
ಸಿಗ್ನಲ್ ನಲ್ಲಿ ನಿಂತಿದ್ದ ಎರಡು ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಗೆ ವೇಗವಾಗಿ ಬಂದ ಸ್ಯಾಂಟ್ರೋ ಕಾರೊಂದು ಗುದ್ದಿದೆ. ಸ್ಯಾಂಟ್ರೋ ಕಾರು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರಿಗೆ ಸೇರಿದ್ದು ಎನ್ನಲಾಗಿದೆ. ಅಪಘಾತದ ಸ್ಥಳಕ್ಕೆ ಧಾವಿಸಿದ ತುಮಕೂರು ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.