ತುಮಕೂರು:- ಜಮೀನು ವ್ಯಾಜ್ಯದ ವಿಚಾರಕ್ಕೆ ಪಾವಗಡದಿಂದ ದೂರು ನೀಡಲು ಬಂದಿದ್ದ ಮಹಿಳೆಯನ್ನು ಪುಸಲಾಯಿಷಿ ಆಕೆಯೊಂದಿಗೆ ಅಸಭ್ಯವಾಗಿ ನಡೆದುಕೊಂಡ ಮಧುಗಿರಿಯ ಡಿವೈಎಸ್ಪಿ ರಾಮಚಂದ್ರಪ್ಪನನ್ನು ಅರೆಸ್ಟ್ ಮಾಡಲಾಗಿದೆ.
ಹೊಸವರ್ಷ ತಂದ ಸಂಕಷ್ಟ: ಜನರಿಗೆ ತಟ್ಟಲಿದೆ ಮತ್ತೆ ನಾಲ್ಕು ಬೆಲೆ ಏರಿಕೆ ಬಿಸಿ..! ಯಾವುವು?
ಮಧುಗಿರಿಯ ಡಿವೈಎಸ್ಪಿ ರಾಮಚಂದ್ರಪ್ಪನನ್ನು ಅಮಾನತು ಮಾಡಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶಿಸಿದ್ದರು. ಇದರ ಬೆನ್ನಲ್ಲೇ ಇದೀಗ ಡಿವೈಎಸ್ಪಿ ರಾಮಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಮಹಿಳೆ ನೀಡಿದ ದೂರಿನ ಮೇರೆಗೆ ಸೆಕ್ಸನ್ 68,75,79 ಅತ್ಯಾಚಾರ ಕೇಸ್ ಅಡಿಯಲ್ಲಿ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ದೂರಿನ ಮೇರೆಗೆ ಇದೀಗ ಮಧುಗಿರಿ ಉಪವಿಭಾಗ ಡಿವೈಎಸ್ ಪಿ ರಾಮಚಂದ್ರಪ್ಪನನ್ನು ಅರೆಸ್ಟ್ ಮಾಡಲಾಗಿದೆ.
ಮಹಿಳೆಯೊಬ್ಬರು ತಮ್ಮ ಜಮೀನಿನ ಕುರಿತಾಗಿ ವ್ಯಾಜ್ಯ ಆರಂಭವಾಗಿದ್ದು, ನೀವು ನಮಗೆ ನ್ಯಾಯ ಕೊಡಿಸಬೇಕು ಎಂದು ಮಹಿಳೆ ದೂರು ನೀಡಿದ್ದರು. ಆಗ ಮಹಿಳೆಗೆ ನಿಮಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿ ಧನಾತ್ಮಕವಾಗಿ ಮಾತನಾಡಿದ್ದ ಡಿವೈಎಸ್ಪಿ ರಾಮಚಂದ್ರಪ್ಪ ನಾವು ವಿಚಾರಣೆಗೆ ಕರೆದಾಗ ಪೊಲೀಸ್ ಠಾಣೆಗೆ ಬರಬೇಕು. ನಾವು ಕೇಳಿದಾಗ ನೀವು ಮಾಹಿತಿ ಕೊಡಬೇಕು ಎಂದು ಹೇಳಿರುತ್ತಾರೆ. ಇದಕ್ಕೆ ಮಹಿಳೆಯೂ ಒಪ್ಪಿಕೊಂಡಿದ್ದಾರೆ.