ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗಳ ಪೈಕಿ ಏಳು ಮಂದಿಗೆ ಜಾಮೀನು ಮಂಜೂರು ಆಗಿದೆ. ಬಳ್ಳಾರಿ ಜೈಲಿನಲ್ಲಿದ್ದ ನಟ ದರ್ಶನ್ ಅವರು ತೀವ್ರ ಬೆನ್ನು ನೋವಿನ ಕಾರಣದಿಂದ ಮೆಡಿಕಲ್ ಗ್ರೌಂಡ್ಸ್ ಮೇಲೆ ಜಾಮೀನು ಪಡೆದುಕೊಂಡು ಹೊರಗೆ ಬಂದಿದ್ದರು. ನಂತರ ನಟ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು.
ನಟನಿಗೆ ಸರ್ಜರಿ ಮಾಡುವುದೋ ಅಥವಾ ಫಿಸಿಯೋ ಥೆರಪಿ ಮಾಡುವುದೋ ಎನ್ನುವ ಬಗ್ಗೆ ಸಾಕಷ್ಟು ಗೊಂದಲವಿತ್ತು. ಆದರೆ ಈಗ ಹೈಕೋರ್ಟ್ ಜಾಮೀನು ಮಂಜೂರು ಮಾಡುತ್ತಿದ್ದಂತೆ ನಟ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿರುವ ಬಿಜಿಎಸ್ ಆಸ್ಪತ್ರೆಗೆ ಅವರ ಪತ್ನಿ ವಿಜಯಲಕ್ಷ್ಮೀ ಹಾಗೂ ಆಪ್ತ ಧನ್ವಿರ್ ಬಂದಿದ್ದರು.
Custard Apple for diabetes: ಡಯಾಬಿಟೀಸ್ ಇರುವವರು ಸೀತಾಫಲ ತಿನ್ನಬಹುದೇ.? ವೈದ್ಯರು ಹೇಳೋದೇನು..?
ಆ ಬಳಿಕ ಅವರು ಡಿಸ್ಚಾರ್ಜ್ ಆಗಿ ಕಾರನ್ನು ಏರಿ ನೇರವಾಗಿ ಮನೆಗೆ ತೆರಳಿದ್ದಾರೆ. ಒಂದೂವರೆ ತಿಂಗಳು ಕಳೆದರೂ ದರ್ಶನ್ ಯಾವುದೇ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ. ‘ಬಿಪಿ ಕಾರಣಕ್ಕೆ ಶಸ್ತ್ರಚಿಕಿತ್ಸೆ ಆಗಿಲ್ಲ’ ಎಂದು ದರ್ಶನ್ ಪರ ವಕೀಲರು ಹೇಳಿದ್ದರು. ಈಗ ದರ್ಶನ್ ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.