ಬೆಂಗಳೂರು:- ಬಿಜೆಪಿಯವರು ಅಮಾಯಕರ ಮೇಲೆ ಕೇಸ್ ಹಾಕಿದ್ದು ಸರೀನಾ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಈ ಹಿಂದೆ ಬಿಜೆಪಿಯವರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸ್ ಹಾಕಿದ್ದರು. ಬೆಂಗಳೂರು, ಹುಬ್ಬಳ್ಳಿಯಲ್ಲಿ ಕೇಸ್ ಹಾಕಿದ್ದಾರೆ ಎಂದರು.
ನಾವು ಅವರ ರೀತಿಯಲ್ಲಿ ಮಾಡುವುದಿಲ್ಲ. ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡಲ್ಲ ಎಂದು ಚಾಟಿ ಬೀಸಿದ್ದಾರೆ.
ನಾವು ಅವರ ರೀತಿಯಲ್ಲಿ ಮಾಡುವುದಿಲ್ಲ. ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡಲ್ಲ ಎಂದು ಚಾಟಿ ಬೀಸಿದ್ದಾರೆ
ಕರಸೇವಕ ಬಂಧನ ವಿರೋಧಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಹಿನ್ನೆಲೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ನಾವು ಯಾರಿಗೂ ತೊಂದರೆ ಕೊಡುವ ಸಂದರ್ಭ ಇಲ್ಲ. ಪೆಡಿಂಗ್ ಇದ್ದ ಕೇಸ್ಗಳನ್ನ ನೋಡಿದ್ದಾರೆ. ಯಾರು ದೇಶಕ್ಕೆ ರಾಜ್ಯಕ್ಕೆ ಅಗೌರವ, ಅಶಾಂತಿ ಮೂಡಿಸುತ್ತಾರೋ ಕಾನೂನು ರೀತಿಯಲ್ಲಿ ಮೊದಲಿಂದಲೂ ಕ್ರಮ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.