ಹುಟ್ಟೂರೆ ಆಗಿರುವ ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಜಕ್ಕೇನಹಳ್ಳಿ ಗ್ರಾಮಕ್ಕೆ ಇಡೀ ಸರ್ಜಾ ಕುಟುಂಬ ಹೋಗಿದ್ದು, ಅಲ್ಲಿ ನಡೆಯುತ್ತಿರುವ ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಒಂದು ಕಡೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪತ್ನಿ ಜೊತೆಗೆ ಬಂದರೆ, ಅತ್ತ ನಟ ಅರ್ಜುನ್ ಸರ್ಜಾ ಹಾಗೂ ಕುಟುಂಬ ಹುಟ್ಟೂರಿಗೆ ಭೇಟಿ ಕೊಟ್ಟಿದೆ. ಹುಟ್ಟೂರಿನ ಅಹೋಬಲನರಸಿಂಹಸ್ವಾಮಿ ಜಾತ್ರೆಯಲ್ಲಿ ಇಡೀ ಸರ್ಜಾ ಕುಟುಂಬ ಭಾಗಿಯಾಗಿದೆ.
ನಟ ಅರ್ಜುನ್ ಸಾರ್ಜಾ, ಧೃವ ಸರ್ಜಾ ಅವರು ದೇವಸ್ಥಾನದ ಪೂಜಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಪ್ರತಿ ವರ್ಷವೂ ಸರ್ಜಾ ಕುಟುಂಬಸ್ಥರು ಈ ಜಾತ್ರೆಗೆ ಬರುತ್ತಾ ಇರುತ್ತಾರೆ. ಅದರಂತೆ ಈ ಬಾರಿಯೂ ಅಹೋಬಲ ನರಸಿಂಹಸ್ವಾಮಿಯ ರಥೋತ್ಸವದಲ್ಲಿ ಭಾಗಿಯಾಗಿ ರಥ ಎಳೆದು ಪೂಜೆ ಸಲ್ಲಿಸಿದ್ದಾರೆ.
ಇನ್ನೂ ಸರ್ಜಾ ಕುಟುಂಬಸ್ಥರನ್ನು ನೋಡುತ್ತಿದ್ದಂತೆ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗಿದ್ದರು. ಆಗ ಅಭಿಮಾನಿಗಳನ್ನು ನಿಯಂತ್ರಣಕ್ಕೆ ತರಲು ಪೊಲೀಸರ ಹರಸಾಹಸ ಪಡುವ ಸ್ಥಿತಿ ನಿರ್ಮಾಣಗೊಂಡಿತ್ತು.