ಪುಷ್ಪ ಸಿನಿಮಾದ ‘ವೂಂ ಅಂಟಾವ ಮಾವ..’ ಹಾಡಿ ಸಿಕ್ಕಾಪಟ್ಟೆ ಫೇಮಸ್ ಆಗಿತ್ತು. ಈ ಹಾಡೇ ಪಷ್ಪ ಸಿನಿಮಾಗೆ ಜನರನ್ನೂ ಕರೆತಂದಿದ್ದು. ಸೋಷಿಯಲ್ ಮೀಡಿಯಾದಲ್ಲಂತೂ ಕೋಟ್ಯಂತರ ಜನರು ರೀಲ್ಸ್ ಮಾಡಿದ್ದರು. ಈ ಹಾಡಿಗೆ ಸಮಂತಾ (Samantha) ಸಖತ್ತಾಗಿಯೇ ಸೊಂಟ ಬಳುಕಿಸಿದ್ದರು. ಈ ಯಶಸ್ಸನ್ನು ಮತ್ತೊಂದು ಬಾರಿ ಬಳಸಿಕೊಳ್ಳಲು ನಿರ್ದೇಶಕರು ಪ್ಲ್ಯಾನ್ ಮಾಡಿದ್ದಾರೆ. ಪುಷ್ಪ 2 ಸಿನಿಮಾದಲ್ಲೂ ಐಟಂ ಸಾಂಗ್ (Item Song) ವೊಂದಿದ್ದು, ಅದಕ್ಕೆ ಸಮಂತಾ ಅವರೇ ಡ್ಯಾನ್ಸ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ಡಾನ್ಸ್ ಮಾಸ್ಟರ್ ಮತ್ತು ನಿರ್ದೇಶಕರು ಸಮಂತಾ ಜೊತೆ ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ. ಸಮಂತಾ ಕೂಡ ಆ ಹಾಡಿನಲ್ಲಿ ಭಾಗಿಯಾಗಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯದಲ್ಲೇ ಶೂಟಿಂಗ್ ಕೂಡ ಶುರು ಮಾಡಲಿದ್ದಾರಂತೆ ಸಮಂತ.