ಬೆಳಗಾವಿ: ಕಾಂಗ್ರೆಸ್ನಲ್ಲಿ (Congress) ಮತ್ತೆ ಮುಂದಿನ ಮುಖ್ಯಮಂತ್ರಿ (CM) ಬಗ್ಗೆ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಕಟ್ಟುನಿಟ್ಟಿನ ಆದೇಶ ನೀಡಿದ್ದರೂ ತೆರೆದ ವೇದಿಕೆಯ ಮೇಲೆಯೇ ಸತೀಶ್ ಜಾರಕಿಹೊಳಿ (Satish Jarkiholi) ಮುಂದಿನ ಸಿಎಂ ಎಂದು ಸವದತ್ತಿ ಶಾಸಕ ವಿಶ್ವಾಸ ವೈದ್ಯ (Vishwas Vaidya) ಹೇಳಿಕೆ ನೀಡಿದ್ದಾರೆ.
ಬೆಳಗಾವಿ (Belagavi) ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಮಾತನಾಡಿರುವ ವಿಶ್ವಾಸ ವೈದ್ಯ, ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಾತೀತವಾಗಿ ಪ್ರಭಾವ ಬೆಳೆಸಿಕೊಂಡಿರುವ ಸತೀಶ್ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ಅಷ್ಟೇ ಸತ್ಯ ಎಂದು ಹೇಳಿದ್ದಾರೆ.
ದೀಪಾವಳಿ ಹಾಗೂ ರಾಜ್ಯೋತ್ಸವ ನಿಮಿತ್ತ ರಸಮಂಜರಿ ಕಾರ್ಯಕ್ರಮ ಆಯೋಜನೆಯಾಗಿತ್ತು. ಕಾರ್ಯಕ್ರಮ ಉದ್ಘಾಟಕರಾಗಿ ಭಾಗಿಯಾಗಿದ್ದ ಸವದತ್ತಿ ಶಾಸಕ ಸಿಎಂ ವಿಚಾರದ ಬಗ್ಗೆ ಯಾರು ಕೂಡಾ ಮಾತನಾಡಬಾರದು ಎಂದು ಆದೇಶಿಸಿದ್ದರೂ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದಿದ್ದಾರೆ.