ಬೆಳಗಾವಿ: ಬಿಡಿಎ, ಬಿಬಿಎಂಪಿ ಆಸ್ತಿಯನ್ನು ಯಾರೇ ಒತ್ತುವರಿ ಮಾಡಿದ್ದರೂ ಮುಲಾಜಿಲ್ಲದೆ ತೆರವಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ, ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ಪ್ರಶ್ನೆಗೆ ಅವರು ಉತ್ತರಿಸಿದರು. ಬಿಡಿಎ ಅಧೀನದಲ್ಲಿ ಇರುವ ಉದ್ಯಾನಗಳ ಸಂಖ್ಯೆ ಮತ್ತು ಉದ್ಯಾನಗಳ ಒತ್ತುವರಿಯ ಬಗ್ಗೆ ಕೇಳಿದ ಪ್ರಶ್ನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದರು.
Winter Health: ಚಳಿಗಾಲದಲ್ಲಿ ವಸಡು ಮತ್ತು ಹಲ್ಲುಗಳ ಆರೈಕೆ ಹೇಗೆ ಗೊತ್ತಾ: ಇಲ್ಲಿದೆ ಟಿಪ್ಸ್!
ನಮ್ಮ ಸರ್ಕಾರ ಅಧಿಕಾರವಹಿಸಿಕೊಂಡ ತಕ್ಷಣ ಬೆಂಗಳೂರಿನ ಆಸ್ತಿಗಳನ್ನು ಹೊಸ ತಂತ್ರಜ್ಞಾನದ ಮೂಲಕ ಮ್ಯಾಪಿಂಗ್ ಕೆಲಸ ಮಾಡುತ್ತಿದೆ. ಒಂದಷ್ಟು ಆಸ್ತಿ ವ್ಯಾಜ್ಯಗಳು ನ್ಯಾಯಾಲಯದಲ್ಲಿವೆ. ಸರ್ಕಾರಿ ಆಸ್ತಿಗಳನ್ನು ಉಳಿಸಿ ಸಾರ್ವಜನಿಕರ ಉಪಯೋಗಕ್ಕೆ ಬಳಕೆ ಮಾಡಲಾಗುವುದು ಎಂದರು. ಒತ್ತುವರಿಯ ಬಗ್ಗೆ ನಿಮ್ಮ ಬಳಿ ನಿರ್ದಿಷ್ಟ ದಾಖಲೆಗಳು ಇದ್ದರೆ ಈಗಲೇ ಕೊಡಿ, ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ. ಯಾರನ್ನೂ ರಕ್ಷಣೆ ಮಾಡುವ ಸಂದರ್ಭ ಬರುವುದಿಲ್ಲ ಎಂದರು.