ಹುಬ್ಬಳ್ಳಿ : ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಯಿಂದ ಸ್ಟಡಿ ಸರ್ಕಲ್ ಯೋಜನೆಯಡಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಎಸ್.ಬಿ.ಐ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಪರೀಕ್ಷೆ ಸಿದ್ಧತೆಗೆ ಉಚಿತ ತರಬೇತಿಯನ್ನು ಜನವರಿ 6 ರಿಂದ 24 ರವರೆಗೆ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಪರೀಕ್ಷಾ ಪೂರ್ವ ತರಬೇತಿಗೆ ಭಾಗವಹಿಸಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡಗಳೊಂದಿಗೆ ಜನವರಿ 6 ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕುವೆಂಪು ರಸ್ತೆ, ನವನಗರ ಹುಬ್ಬಳ್ಳಿ ಕಚೇರಿಗೆ ಹಾಜರಾಗಬೇಕು. ತರಬೇತಿಯು ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ.
ರೈತರ ಗಮನಕ್ಕೆ.. ಈ ಯೋಜನೆಯಲ್ಲಿ ಸೋಲಾರ್ ಪಂಪ್ ಸೆಟ್ʼಗೆ ಸಿಗಲಿದೆ 1.5 ಲಕ್ಷ ಸಹಾಯಧನ! ಇಂದೇ ಅರ್ಜಿ ಸಲ್ಲಿಸಿ
ತರಬೇತಿ ಮಾತ್ರ ಉಚಿತವಾಗಿದ್ದು, ಇನ್ನಿತರ ಯಾವುದೇ ಸೌಲಭ್ಯ ಇರುವುದಿಲ್ಲ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0836-2225288, 9164192155, 8453208555 ಸಂಪರ್ಕಿಸಬಹುದು. ಅರ್ಹ ಅಭ್ಯರ್ಥಿಗಳು ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.