ಕೋಲಾರ: ರಾಜ್ಯದಲ್ಲಿ ಪಿಎಸ್ಐ ನೇಮಕಾತಿ, ಶಿಕ್ಷಕರ ನೇಮಕಾತಿ ಸೇರಿದಂತೆ ಕೆಲವೊಂದು ಇಲಾಖೆಗಳಲ್ಲಿನ ನೇಮಕಾತಿಯಲ್ಲಿ ನಡೆದ ಅಕ್ರಮಗಳು ಬಯಲಿಗೆ ಬಂದಂತೆ, ಇದೀಗ ಕೋಲಾರ ಹಾಲು ಒಕ್ಕೂಟದ ನೇಮಕಾತಿಯಲ್ಲಿ ನಡೆದ ದಂಧೆ ವಿಚಾರವೂ ಬಟಾಬಯಲಾಗಿದೆ. ಸಂಭವನೀಯ ಅಭ್ಯರ್ಥಿಗಳ ಪಟ್ಟಿ ವೈರಲ್ ಆಗುತ್ತಿದ್ದು, ನೇಮಕಾತಿಯಲ್ಲಿ ಲಕ್ಷ ಲಕ್ಷ ಡೀಲ್ ನಡೆದಿರುವ ಅನುಮಾನ ವ್ಯಕ್ತವಾಗಿದೆ. ಕೋಲಾರ ಹಾಲು ಒಕ್ಕೂಟದ ನೇಮಕಾತಿಯಲ್ಲಿ ವಿದ್ಯಾರ್ಹತೆಗಿಂತ ಶಿಫಾರಸ್ಸು ಪತ್ರವೇ ಮುಖ್ಯವಾಗಿದೆ.
ಶಿಫಾರಸ್ಸು ಇದ್ದವರಿಗೆ ಮಾತ್ರ ಒಕ್ಕೂಟದಲ್ಲಿ ಕೆಲಸ ನೀಡಲಾಗುತ್ತದೆ. ಸೆಪ್ಟೆಂಬರ್ನಲ್ಲಿ ಕೆರೆಯಲಾಗಿದ್ದ 81 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿ ಲಿಖಿತ ಪರೀಕ್ಷೆ ನಡೆದಿದ್ದು, ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಕೂಡ ಸಿದ್ಧವಾಗಿದೆ. ಸದ್ಯ, ಸಂಭವನೀಯ ಅಭ್ಯರ್ಥಿಗಳ ಪಟ್ಟಿ ವೈರಲ್ ಆಗಿದ್ದು, ಅಭ್ಯರ್ಥಿಗಳ ಹೆಸರ ಮುಂದೆ ಶಿಫಾರಸ್ಸು ಮಾಡಿದರ ಹೆಸರು ಹಾಕಲಾಗಿದೆ.
Brinjal Side Effects: ಈ ಆರೋಗ್ಯ ಸಮಸ್ಯೆ ಇರೋರು ಬದನೆಕಾಯಿಯನ್ನು ತಿನ್ನಲೇಬೇಡಿ..!
ಒಕ್ಕೂಟದ ನಿರ್ದೇಶಕರು ಸೇರಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಶಾಸಕರುಗಳ ಹೆಸರುಗಳು ಪತ್ತೆಯಾಗಿವೆ. ಇದರ ಪ್ರತಿ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರಿಂದ ಆಕ್ರೋಶ ವ್ಯಕ್ತವಾಗಿದೆ. ಇನ್ನೂ ಕೋಲಾರ ಹಾಲು ಒಕ್ಕೂಟದಲ್ಲಿನ 81 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇನ್ನೆರಡು ದಿನದಲ್ಲಿ ನೇಮಕಾತಿ ಪ್ರಕ್ರಿಯೆ ಅಂತಿಮ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ. ಇದಕ್ಕೂ ಮುನ್ನ ನೇಮಕಾತಿ ಪಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಡುತ್ತಿದೆ.