ನವದೆಹಲಿ:- ಕರ್ನಾಟಕದ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ಹೊರ ಹಾಕಿದ್ದಾರೆ.
ಟೀಮ್ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಗೆ ಬಿಗ್ ಶಾಕ್: ಶೀಘ್ರವೇ ಹೊರ ಕ್ಯಾಪ್ಟನ್ ನೇಮಕ!
ಈ ಸಂಬಂಧ ಮಾತನಾಡಿದ ಅವರು,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಹಗರಣ ಮಾತ್ರವಲ್ಲ, ವಾಲ್ಮೀಕಿ ನಿಗಮದಲ್ಲಿ 89 ಕೋಟಿ ರೂಪಾಯಿ ಲಪಟಾಯಿಸಿದ್ದಾರೆ. ಇದಕ್ಕೆಲ್ಲಾ ಸಿಎಂ ಸಿದ್ದರಾಮಯ್ಯನವೇ ಉತ್ತರ ಕೊಡಬೇಕು ಮತ್ತು ಮಾಡಿದ ಅಪರಾಧಕ್ಕೆ ತಕ್ಕ ಬೆಲೆ ತೆರಬೇಕು ಎಂದರು.
ಸಿಎಂ ವಿರುದ್ಧದ ಮುಡಾ ಹಗರಣದಲ್ಲಿ ತನಿಖೆ ಅಗತ್ಯ ಎಂದು ಹೈಕೋರ್ಟ್ ಹೇಳಿದೆ. ಸಿಎಂ ಪ್ರಭಾವ ಇಲ್ಲದೆ, ಕುಟುಂಬಕ್ಕೆ ನಿವೇಶನ ಹಂಚಿಕೆಯಲ್ಲಿ ಮುಡಾ ಸ್ವಂತ ನಿರ್ಣಯ ಅಸಾಧ್ಯ. ಹಾಗಾಗಿ ಇದರ ತನಿಖೆ ಅವಶ್ಯಕ ಎಂದೇ ಕೋರ್ಟ್ ಹೇಳಿದೆ. ಇನ್ನು, ವಾಲ್ಮೀಕಿ ನಿಗಮದಲ್ಲೂ ಅಷ್ಟೇ, ಚುನಾವಣೆ ವೇಳೆ ಹಣಕಾಸು ಸಚಿವರೂ ಆಗಿರುವ ಸಿಎಂ ಗಮನಕ್ಕೆ ಬರದೇ ವಿವಿಧ ಬ್ಯಾಂಕ್ ಖಾತೆಗಳಿಗೆ ಕೋಟ್ಯಂತರ ರೂಪಾಯಿ ವರ್ಗಾವಣೆ ಸಾಧ್ಯವಿಲ್ಲ ಎಂದು ಹೇಳಿದರು.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹೋರಾಟ ನಿಲ್ಲದು. ಹಗರಣಗಳ ಹೊಣೆ ಹೊತ್ತು ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ಪ್ರಲ್ಹಾದ್ ಜೋಶಿ ಆಗ್ರಹಿಸಿದರು.