ಎಸ್.ಎಸ್.ಎಲ್.ಸಿ. (SSLC) ಅಥವಾ 10ನೇ ತರಗತಿಯನ್ನು ಪೂರ್ಣಗೊಳಿಸಿದ ನಂತರ ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು ಅಥವಾ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳವರೆಗೆ ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್ಗಳ ಖಾತೆಗಳಿಗೆ ನೇರ ನಗದು ವರ್ಗಾವಣೆ (DBT – Direct Benefit Transfer) ಪದ್ಮತಿಯ ಮೂಲಕ 2022-23ನೇ ಆರ್ಥಿಕ ವರ್ಷದ ಸಾಲಿನಿಂದ ಜಾರಿಗೆ ಬರುವಂತ ಶಿಷ್ಯ ವೇತನದ ಹಣದ ಮೊತ್ತವನ್ನು ವಾರ್ಷಿಕ ಶಿಷ್ಯ ವೇತನ (Scholarship) ರೂಪದಲ್ಲಿ ಒದಗಿಸಲು ಮತ್ತು ಪಾವತಿಸಲು ಸರ್ಕಾರವು ಅನುಮೋದನೆಯನ್ನು ನೀಡಿದೆ.
ಕೋರ್ಸ್ ನ ಹೆಸರು / ವಿಧಗಳು |
ಹುಡುಗರು / ಪುರುಷರು |
ಹುಡುಗಿಯರು / ಅನ್ಯ ಲಿಂಗದವರು |
---|---|---|
ಪದವಿಯ ಮುಂಚೆ ಪಿ.ಯು.ಸಿ / ಐ.ಟಿ.ಐ / ಮತ್ತು ಡಿಪ್ಲೋಮ |
₹2,500 | ₹3,000 |
ಬಿ.ಎ / ಬಿ.ಎಸ್.ಸಿ / ಬಿ.ಕಾಂ, ಇತ್ಯಾದಿ (ಎಂ.ಬಿ.ಬಿ.ಎಸ್ / ಬಿ.ಇ. / ಬಿ.ಟಿಕ್ ಮತ್ತು ವೃತ್ತಿಪರ ಕೋರ್ಸ್ ಗಳನ್ನು ಹೊರತುಪಡಿಸಿ) |
₹5,000 | ₹5,500 |
ಎಲ್.ಎಲ್.ಬಿ / ಬಿ.ಫಾರ್ಮ್ ಪ್ಯಾರ ಮೆಡಿಕಲ್ / ನರ್ಸಿಂಗ್ ಇತ್ಯಾದಿ., ವೃತ್ತಿಪರ ಕೋರ್ಸ್ ಗಳು |
₹7,500 | ₹8,000 |
ಎಂ.ಬಿ.ಬಿ.ಎಸ್ / ಬಿ.ಇ / ಬಿ.ಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್ ಗಳು |
₹10,000 | ₹11,000 |
ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿ ಉಳುಮೆ ಮಾಡುವಂತಹ / ಕೃಷಿ ಮಾಡುವಂತಹ ಜಮೀನನ್ನು ತನ್ನ ಹೆಸರಿನಲ್ಲಿ ಹೊಂದಿರುವಂತಹ ವ್ಯಕ್ತಿಯ ಮಕ್ಕಳು ಈ ಯೋಜನೆಯ ಉಪಯೋಗವನ್ನು ಪಡೆಯಬಹುದು. ಪೋಷಕ / ಪೋಷಕರ ಜೈವಿಕ ಸಂತತಿ ಮತ್ತು ಕಾನೂನಿನ ಪ್ರಕಾರ ದತ್ತು ಪಡೆದಿರುವ ಮಕ್ಕಳು ಸಹ ಈ ಜೋಜನೆಗೆ ಒಳಪಡುತ್ತಾರೆ. ಒಂದು ಪಕ್ಷ ಯಾವುದೇ ಮಕ್ಕಳಿಗೆ ಪೋಷಕ / ಪೋಷಕರು ಇಲ್ಲದೆ ಇದ್ದ ಸಂದರ್ಭದಲ್ಲಿ, ಈ ಯೋಜನೆಯ ಲಾಭವನ್ನು ಪಡೆಯಲು ಉಳುಮೆ ಮಾಡುವಂತಹ / ಕೃಷಿ ಮಾಡುವಂತಹ ಜಮೀನನ್ನು ಅವರು ಹೊಂದಿರ ಬೇಕಾಗುತ್ತದೆ.
ಷರತ್ತುಗಳು
- ಈ ರೈತರ ಮಕ್ಕಳು ಕರ್ನಾಟಕ ರಾಜ್ಯದ ಅನುದಾನದಿಂದ ಪಾವತಿಸುವಂತಹ ಒಂದು ಶಿಷ್ಯವೇತನಕ್ಕೆ ಮಾತ್ರ ಅರ್ಹರಾಗುತ್ತಾರೆ. ಆದರೆ, ಮೆರಿಟ್, ಅರ್ಹತಾ ಪರೀಕ್ಷೆ, ಶೈಕ್ಷಣಿಕ ಪರೀಕ್ಷೆಗಳಲ್ಲಿ ರಾಂಕ್ ಇತ್ಯಾದಿಗಳ ಆಧಾರದ ಮೇಲೆ ಪಡೆಯುವ ಶಿಷ್ಯವೇತನ / ಪ್ರಶಸ್ತಿ (award)/ ಪ್ರತಿಫಲ (reward) – ಇವುಗಳನ್ನು ರೈತರ ಮಕ್ಕಳು ಪಡೆದಿದ್ದರೂ, ಈ ಶಿಷ್ಯವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ.
- ರೈತರ ಮಕ್ಕಳ ತಂದೆ-ತಾಯಿ ಇಬ್ಬರೂ ಕೃಷಿ ಜಮೀನಿನ ಒಡೆಯರಾಗಿದ್ದರೆ, ಈ ಯೋಜನೆಯಲ್ಲಿ ಒಂದು ಶಿಷ್ಯವೇತನಕ್ಕೆ ಮಾತ್ರ ರೈತರ ಮಕ್ಕಳು ಅರ್ಹರಾಗಿರುತ್ತಾರೆ.
- ಈ ಶಿಷ್ಯವೇತನವು ಶಿಕ್ಷಣದ ಯಾವುದೇ ಕೋರ್ಸಿನ ಸೆಮಿಸ್ಟರ್ / ಶೈಕ್ಷಣಿಕ ವರ್ಷಗಳಿಗೆ ಮಿತಿಯಾಗಿರತಕ್ಕದ್ದು.
- ಕೋರ್ಸ್ನ ಸೆಮಿಸ್ಟರ್ / ಶೈಕ್ಷಣಿಕ ವರ್ಷದಲ್ಲಿ ಅನುತ್ತೀರ್ಣ ಹೊಂದಿ ಪುನ: ಸೆಮಿಸ್ಟರ್ ಶೈಕ್ಷಣಿಕ ವರ್ಷದಲ್ಲಿ ವಿದ್ಯಾಭ್ಯಾಸದ ಪುನರಾವರ್ತನೆಯಾದರೆ ಅಥವಾ ಪುನಃ ಪರೀಕ್ಷೆ ತೆಗೆದುಕೊಂಡರೆ ವಿದ್ಯಾರ್ಥಿಗಳು ಶಿಷ್ಯವೇತನವನ್ನು ಪಡೆಯಲು ಅರ್ಹರಾಗಿರುವುದಿಲ್ಲ.
- ಈ ಶಿಷ್ಯವೇತನವನ್ನು ಯಾವುದಾದರೂ ಒಂದು ವಿಧದ ಕೋರ್ಸ್ಗೆ ನೀಡಲಾಗುವುದು. ಉದಾಹರಣೆಗೆ, ‘A’ ಎಂಬ ಸ್ನಾತಕೋತ್ತರ ಪದವಿಯನ್ನು ಪೂರೈಸಿದ ನಂತರ ‘B’ ಎಂಬ ಸ್ನಾತಕೋತ್ತರ ಕೋರ್ಸ್ಗೆ ವಿದ್ಯಾರ್ಥಿಯು ಪ್ರವೇಶ ಪಡೆದಲ್ಲಿ, ಈ ಕೋರ್ಸ್ಗೆ ಶಿಷ್ಯವೇತನವನ್ನು ಪಡೆಯಲು ಅರ್ಹವಾಗುವುದಿಲ್ಲ