ದೊಡ್ಡಬಳ್ಳಾಪುರ: ಚಾಲಕನ ಅಜಾರೂಕತೆಯಿಂದ ಖಾಸಗಿ ಶಾಲೆಯ ಬಸ್ ಕೆರೆ ಏರಿ ಮೇಲಿಂದ ಉರುಳಿಬಿದ್ದ ಪ್ರಕರಣದಲ್ಲಿ ಬಾಲಕನೊಬ್ಬ ಗಂಭೀರ ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.
ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ಕೊಡಿಸುತ್ತಿದ್ದು, ಆಸ್ಪತ್ರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ರಂಗಪ್ಪ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಲ್.ಪುರುಷೋತ್ತಮ ಭೇಟಿ ನೀಡಿ ಶಾಲಾ ವ್ಯವಸ್ಥಾಪನಾ ಸಮಿತಿ ಹಾಗೂ ಬಾಲಕನ ಪೋಷಕರಿಂದ ಮಾಹಿತಿ ಪಡೆದರು.

ತಿರುಮಗೊಂಡನಹಳ್ಳಿ-ಗಂಗಸಂದ್ರ ಕೆರೆ ಏರಿ ಮೇಲೆ ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ ಅವಗಢದಲ್ಲಿ ಪಾಲ್ ಪಾಲ್ ದಿನ್ನೆ ಗ್ರಾಮದ ನಂದನ್(13) ತೀವ್ರ ಗಾಯಗೊಂಡು, ಚಿಕಿತ್ಸೆ ಪಡೆಯುತ್ತಿದ್ದಾನೆ.
ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮತ್ತೊಬ್ಬ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಸ್ಪತ್ರೆಯಲ್ಲಿ ಬಾಲಕ ಆರೋಗ್ಯ ವಿಚಾರಿಸಿದ ಬಳಿಕ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಲ್.ಪುರುಷೋತ್ತಮ್ ಅವರು ಖಾಸಗಿ ಶಾಲೆಗಳ ಬಸ್ ಚಾಲಕರಿಗೆ ಸೂಕ್ತ ನಿರ್ದೇಶನ ನೀಡುವಂತೆ ಆಡಳಿತ ಮಂಡಳಿಗಳ ಪದಾಧಿಕಾರಿಗಳಿಗೆ ಸೂಚನೆ ನೀಡಿದರು.
