ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಜನವರಿ 10, 2024 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್( ಮೂಲಕ ಅರ್ಜಿ ಹಾಕಬೇಕು.
ವಿದ್ಯಾರ್ಹತೆ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ವಾರ್ಷಿಕ ಪ್ಯಾಕೇಜ್ 7 ಲಕ್ಷ
ಉದ್ಯೋಗದ ಸ್ಥಳ:
ಬೆಂಗಳೂರು