ಬೆಂಗಳೂರು: ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಎರಡನೇ ಟಿ-20 ಪಂದ್ಯವು ಇಂದೋರ್ನ ಹೋಲ್ಕರ್ ಕ್ರೀಡಾಂಗಣದಲ್ಲಿ ಸಂಜೆ 7 ಗಂಟೆಗೆ ನಡೆಯಲಿದೆ.
ಈಗಾಗಲೇ ಮೊದಲ ಪಂದ್ಯದಲ್ಲಿ ದುಬೆ ದರ್ಬಾರ್ನಿಂದ 6 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದ್ದ ಭಾರತ, ಇಂದಿನ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿದೆ.
ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದ ರನ್ ಮೆಷಿನ್ ವಿರಾಟ್ ಕೊಹ್ಲಿ ಅವರು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಕಿಂಗ್ ಕೊಹ್ಲಿ ಆಗಮನದಿಂದ ತಿಲಕ್ ವರ್ಮಾ ಅವರಿಗೆ ಕೊಕ್ ನೀಡುವ ಸಾಧ್ಯತೆಯಿದೆ.
ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ/ತಿಲಕ್ ವರ್ಮಾ, ಶಿವಂ ದುಬೆ, ಜಿತೇಶ್ ಶರ್ಮಾ (ವಿ.ಕೀ.), ರಿಂಕು ಸಿಂಗ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್
ಅಫ್ಘಾನಿಸ್ತಾನ ತಂಡ
ಇಬ್ರಾಹಿಂ ಝದ್ರಾನ್ (ನಾಯಕ), ರೆಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಹಜರತುಲ್ಲಾ ಝಜೈ, ರಹಮತ್ ಶಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಅಜ್ಮುಲ್ಲಾ ಉಮರ್ಜಾಯ್, ಶರಫುದ್ದೀನ್ ಅಶ್ರಫ್, ಮುಜೀಬ್ ಉರ್ ರೆಹಮಾನ್, ಫಜಲ್ ಹಕ್ ಫಾರೂಕಿ, ಫರೀದ್ ಅಹ್ಮದ್, ನವೀನ್ ಉಲ್ ಹಕ್, ನೂರ್ ಅಹ್ಮದ್, ಮೊಹಮ್ಮದ್ ಸಲೀಂ, ಖೈಸ್ ಅಹ್ಮದ್, ಗುಲ್ಬದಿನ್ ನೈಬ್ ಮತ್ತು ರಶೀದ್ ಖಾನ್