ಬೆಂಗಳೂರು: ಇವಿಎಂ ಮಷಿನ್ ಇರುವ ಕೇಂದ್ರಗಳಲ್ಲಿ ಸಿಆರ್ಪಿಎಫ್ ಭದ್ರತೆ ಒದಗಿಸಲಾಗಿದ್ದು, ರಕ್ಷಣೆಗಾಗಿ ಕೆಎಸ್ಆರ್ಪಿ, ಸಿಎಆರ್ ತುಕಡಿಗಳ ನಿಯೋಜನೆ ಮಾಡಲಾಗಿದೆ. ಕಾನೂನುಸುವ್ಯವಸ್ಥೆ, ಸೂಕ್ತ ರೆಗ್ಯುಲೇಟರಿ ವ್ಯವಸ್ಥೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಡಿಸಿಪಿ ಮಟ್ಟದ ಅಧಿಕಾರಿಗಳು ಮೇಲುಸ್ತುವಾರಿ ವಹಿಸುತ್ತಾರೆ. ಮತ ಎಣಿಕೆ ಕೇಂದ್ರಗಳ ಹೊರಗೂ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದ್ದು, ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
IAF Recruitment 2024: ಭಾರತೀಯ ವಾಯುಪಡೆಯಲ್ಲಿ ಭರ್ಜರಿ ಉದ್ಯೋಗವಕಾಶ..! ತಿಂಗಳಿಗೆ ಸಂಬಳ 56,000
ಲೋಕಸಭೆ ಚುನಾವಣೆ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಸುದೀರ್ಘ ಎರಡು ತಿಂಗಳುಗಳ ಕಾಲ ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಮತದಾನ ನಡೆಯಿತು. ಜೂನ್ 1 ರಂದು ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದೆ. ಜೂನ್ 4 ರಂದು ನಿರ್ಣಾಯಕ ದಿನವಾಗಿದೆ. ಮಂಗಳವಾರ ಲೋಕಸಭೆ ಚುನಾವಣೆ ಮತ್ತು ಕೆಲವು ಕಡೆ ವಿಧಾನಸಭೆ ಚುನಾಣೆಯ ಫಲಿತಾಂಶ ಹೊರಬೀಳಲಿದೆ.