ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ಭಾರತೀಯ ಸೇನೆ ಭರ್ಜರಿ ಕಾರ್ಯಚರಣೆ ನಡೆಸಿದ್ದು ಮೂವರು ಉಗ್ರರನ್ನು ಎನ್ಕೌಂಟರ್ ಮಾಡಲಾಗಿದೆ.
ಖಚಿತ ಮಾಹಿತಿ ಮೇರೆಗೆ ಉಗ್ರರು ಅಡಗಿಕೊಂಡಿದ್ದ ತಾಣದ ಮೇಲೆ ಭದ್ರತಾಪಡೆ ಗುಂಡಿನ ದಾಳಿ ನಡೆಸಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಇನ್ನು ಹತೈಗೈದ ಮೂವರು ಉಗ್ರರು ಜೈಷ್ ಎ ಮೊಹಮ್ಮದ್ ಸಂಘಟನೆಗೆ ಸೇರಿದವರಾಗಿದ್ದು, ಇವರಲ್ಲಿ ಒಬ್ಬ ಪಾಕಿಸ್ತಾನಿ ಪ್ರಜೆಯಾಗಿದ್ದಾನೆ. ಇನ್ನು ಘಟನೆಯ ಸ್ಥಳದಲ್ಲಿ 2 M-4 ಕಾರ್ಬೈನ್‌ಗಳು ಮತ್ತು 1 AK ಸರಣಿ ರೈಫಲ್, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ಐಜಿಪಿ ಮಾಹಿತಿ ನೀಡಿದ್ದಾರೆ.

