ನವದೆಹಲಿ: ಸಂಸತ್ನಲ್ಲಿ (Parliament) ಬುಧವಾರ ನಡೆದ ಭದ್ರತಾ ಉಲ್ಲಂಘನೆಗೆ (Security Breach) ಸಂಬಂಧಿಸಿಂತೆ ಒಟ್ಟು 5 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಆರೋಪಿಗಳನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲೋಕಸಭೆಯಲ್ಲಿ (Lok Sabha) ನಡೆದ ಸ್ಮೋಕ್ ಬಾಂಬ್ ಪ್ರಕರಣದಲ್ಲಿ ಒಟ್ಟು 6 ಮಂದಿ ಭಾಗಿಯಾಗಿದ್ದು, ಮೈಸೂರಿನ ನಿವಾಸಿ ಮನೋರಂಜನ್ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಅವರೆಲ್ಲರೂ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಸಂಪರ್ಕ ಹೊಂದಿದ್ದರು ಎಂದು ತಿಳಿದುಬಂದಿದೆ. ಮೈಸೂರಿನ ವಿಜಯನಗರ ನಿವಾಸಿ ಎಂಜಿನಿಯರಿಂಗ್ ಪದವೀಧರ ಮನೋರಂಜನ್, ಲಕ್ನೋದ ಸಾಗರ್ ಶರ್ಮಾ, ಹರಿಯಾಣದ ಹಿಸಾರ್ನ ನೀಲಂ, ಮಹಾರಾಷ್ಟ್ರದ ಲಾತೂರ್ನ ಅಮೋಲ್ ಶಿಂಧೆ ಹಾಗೂ ವಿಶಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದು,
Nail Cutting At Night: ರಾತ್ರಿ ಯಾಕೆ ಉಗುರು ಕತ್ತರಿಸಬಾರದು ಗೊತ್ತಾ..? ಇಲ್ಲಿದೆ ನೋಡಿ ಕಾರಣ
ಇನ್ನೋರ್ವ ಆರೋಪಿಗಾಗಿ ಶೋಧ ಮುಂದುವರೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಆದೇಶಿಸಿದ್ದಾರೆ. ಘಟನೆಯಲ್ಲಿ ಸಾಗರ್ ಶರ್ಮಾ ಮತ್ತು ಮನೋರಂಜನ್ ಸಂಸತ್ನ ಒಳಗೆ ಹಳದಿ ಸ್ಮೋಕ್ ಬಾಂಬ್ ಸಿಡಿಸಿದರೆ ಸಂಸತ್ತಿನ ಹೊರಗೆ ನೀಲಂ ಮತ್ತು ಅಮೋಲ್ ಶಿಂಧೆ ಕೆಂಪು ಮತ್ತು ಹಳದಿ ಸ್ಮೋಕ್ ಬಾಂಬ್ ಸಿಡಿಸಿದ್ದಾರೆ.
ಇನ್ನಿಬ್ಬರು ಆರೋಪಿಗಳಾದ ವಿಶಾಲ್ ಮತ್ತು ಲಲಿತ್ ಝಾ ಗುರ್ಗಾಂವ್ ಮೂಲದವರು. ಲಲಿತ್ ಝಾ ತಮ್ಮ ಮೊಬೈಲ್ನಲ್ಲಿ ಘಟನೆಯ ದೃಶ್ಯಾವಳಿಗಳನ್ನು ಸೆರೆಹಿಡಿದು ಮೊಬೈಲ್ ಜೊತೆಗೆ ಅಲ್ಲಿಂದ ಪರಾರಿಯಾಗಿದ್ದಾನೆ. ಇನ್ನು ವಿಶಾಲ್ ಇತರೆ ಆರೋಪಿಗಳಿಗೆ ಆಶ್ರಯ ನೀಡಿದ್ದ ಎಂದು ತಿಳಿದುಬಂದಿದೆ. ದೆಹಲಿ ಪೊಲೀಸರ ಈವರೆಗಿನ ತನಿಖೆಯಲ್ಲಿ ಎಲ್ಲಾ ಆರೋಪಿಗಳು ಭಗತ್ ಸಿಂಗ್ ಫ್ಯಾನ್ಸ್ ಕ್ಲಬ್ ಎಂಬ ಗ್ರೂಪ್ನಲ್ಲಿ ಸಂಪರ್ಕ ಹೊಂದಿದ್ದು, ಒಂದೂವರೆ ವರ್ಷಗಳ ಹಿಂದೆಯೇ ಮೈಸೂರಿನಲ್ಲಿ ಭೇಟಿಯಾಗಿ ಯೋಜನೆ ಬಗ್ಗೆ ಚರ್ಚೆ ನಡೆಸಿದ್ದರು ಎನ್ನಲಾಗುತ್ತಿದೆ.