ಬೆಂಗಳೂರು:- ತಂದೆ-ತಾಯಿಯನ್ನು ವೃದ್ಧಾಶ್ರಮಕ್ಕೆ ಸೇರಿಸಿದವರ ವಿರುದ್ದ ಕ್ರಿಮಿನಲ್ ಕೇಸ್ ಹಾಕೋದಕ್ಕೆ ಪೊಲೀಸ್ ಅಧಿಕಾರಿಗಳು ರೆಡಿಯಾಗಿದ್ದಾರೆ.
ಈಗಾಗಲೇ ಈ ಸಂಬಂಧ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸುವವರ ವಿರುದ್ಧ ಮುಲಾಜಿಲ್ಲದೇ ಕ್ರಿಮಿನಲ್ ಪ್ರಕರಣ ದಾಖಲು ಮಾಡುವಂತೆ ಹೇಳಿದ್ದಾರೆ.
ಅಲ್ಲದೇ ತಂದೆ-ತಾಯಿಯನ್ನು ಸರಿಯಾಗಿ ನೋಡಿಕೊಳ್ಳದ ಮಕ್ಕಳ ಮೇಲೆ ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಪ್ರಕರಣ ದಾಖಲಿಸುವಂತೆ ಪೊಲೀಸ್ ಕಮೀಷನರ್ ಬಿ. ದಯಾನಂದ್ ಸೂಚಿಸಿದ್ದಾರೆ.