ರಾಮನಗರ:- ಹಣದ ಆಸೆಗೆ ಸ್ವಂತ ಮಗುವನ್ನೇ ಮಾರಾಟ ಮಾಡಿದ ಹಿನ್ನೆಲೆ, ತಾಯಿ ಸೇರಿ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ.
2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ: ಜಯ ಮೃತ್ಯುಂಜಯ ಶ್ರೀ!
ಹಣದ ಆಸೆಗೆ ಬಿದ್ದ ತಾಯಿಯೋರ್ವಳು ತನ್ನ ಗಂಡನಿಗೂ ತಿಳಿಸದೇ ಹೆತ್ತ ಮಗುವನ್ನೇ ಮಾರಾಟ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಈ ಸಂಬಂಧ ಪತ್ನಿಯ ವಿರುದ್ಧ ಪತಿಯೇ ದೂರು ನೀಡಿದ್ದು, ಪತ್ನಿ ಹಾಗೂ ಇತರೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸದ್ದಾಂ ಪಾಷಾ ಹಾಗೂ ನಸ್ರೀನ್ ತಾಜ್ ಕಳೆದ 6 ವರ್ಷಗಳ ಹಿಂದೆ ಮದುವೆ ಆಗಿದ್ದರು. ಅವಳಿ ಮಕ್ಕಳು ಸೇರಿ ಒಟ್ಟು 4 ಮಕ್ಕಳಿದ್ದು, ಕೂಲಿ ಕೆಲಸ ಮಾಡುತ್ತಿದ್ದ ಸದ್ದಾಂ ಬಡತನದಲ್ಲಿ ಜೀವನ ನಡೆಸುತ್ತಿದ್ದರು. ಕಳೆದ 30 ದಿನಗಳ ಹಿಂದೆ ದಂಪತಿಗೆ ಗಂಡು ಮಗು ಜನಿಸಿತ್ತು. ಸದ್ದಾಂ ಕೆಲ ಕೈಸಾಲ ಕೂಡಾ ಮಾಡಿಕೊಂಡಿದ್ದ ಹಿನ್ನೆಲೆ ಈ ಸಾಲ ತೀರಿಸುವ ಸಂಬಂಧ ಕೊನೆಯ ಮಗುವನ್ನು ಮಾರಾಟ ಮಾಡುವಂತೆ ನಸ್ರೀನ್, ಸದ್ದಾಂಗೆ ಪೀಡಿಸುತ್ತಲೇ ಬಂದಿದ್ದಳು. ಆದರೆ, ಸದ್ದಾಂ ಪತ್ನಿಯ ಮಾತನ್ನು ತಿರಸ್ಕರಿಸಿದ್ದ.
ಕೊನೆಗೆ ಡಿ.5ಕ್ಕೆ ಪತಿ ಕೆಲಸಕ್ಕೆ ಹೋಗಿದ್ದನ್ನು ಬಳಸಿಕೊಂಡ ನಸ್ರೀನ್ ಸ್ಥಳೀಯ ಅಸ್ಲಾಂ ಹಾಗೂ ಫಾಹಿಮಾ ಸಹಾಯದೊಂದಿಗೆ ಬೆಂಗಳೂರಿನ ನಿವಾಸಿ ತರ್ನಮ್ ಸುಲ್ತಾನ್ ಎಂಬವರಿಗೆ ಗಂಡು ಮಗುವನ್ನು 1.5 ಲಕ್ಷಕ್ಕೆ ಮಾರಾಟ ಮಾಡಿದ್ದಾಳೆ. ಇನ್ನು ಪತಿ ಸದ್ದಾಂ ಪಾಷಾ ಕೆಲಸ ಮುಗಿಸಿ ಮನೆಗೆ ಬಂದ ಸಂದರ್ಭದಲ್ಲಿ ಮಗುವಿನ ಕುರಿತು ವಿಚಾರಿಸಿದ್ದಾನೆ. ಈ ವೇಳೆ ನಸ್ರೀನ್ ಮಗುವಿಗೆ ಹುಷಾರಿಲ್ಲ ಸಂಬಂಧಿಕರು ಕರೆದುಕೊಂಡು ಹೋಗಿದ್ದು, ಬೆಳಗ್ಗೆ ವಾಪಸ್ ಬಿಡುತ್ತಾರೆ ಎಂದು ಸಮಜಾಯಿಷಿ ನೀಡಿದ್ಧಾಳೆ.