ನವದೆಹಲಿ:- ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿಗೆ ಹುಟ್ಟುಹಬ್ಬ ಸಂಭ್ರಮ ಮನೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.
ಭಾರತ-ಪಾಕ್ ಸೈನಿಕರಿಂದ ಗಡಿಯಲ್ಲಿ ದೀಪಾವಳಿ ಸೆಲೆಬ್ರೇಷನ್!? ಇದು ನಿಜನಾ!?
ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಇಂದು ತಮ್ಮ 97ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಪ್ರಧಾನಿ ನರೇಂದ್ರ ಮೋದಿ ಅಡ್ವಾಣಿ ಅವರ ನಿವಾಸಕ್ಕೆ ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ದಶಕಗಳ ಕಾಲ ಭಾರತದ ರಾಜಕೀಯದ ಮೂಲಾಧಾರವಾಗಿರುವ ಅಡ್ವಾಣಿ ಅವರನ್ನು ಪ್ರಧಾನಿಯವರು ಹೃತ್ಪೂರ್ವಕವಾಗಿ ಹಾರೈಸಿದರು. ಅವರು ದೇಶದ ರಾಜಕೀಯ ಕ್ಷೇತ್ರಕ್ಕೆ ಅವರು ನೀಡಿದ ಅಪಾರ ಕೊಡುಗೆಗಳನ್ನು ಶ್ಲಾಘಿಸಿದರು.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಅಡ್ವಾಣಿಯನ್ನು ಭಾರತದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು ಎಂದು ಶ್ಲಾಘಿಸಿದ್ದಾರೆ. ರಾಷ್ಟ್ರದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಅವರ ಸಮರ್ಪಣೆಯ ಬಗ್ಗೆ ಗೌರವ ಸೂಚಿಸಿದ್ದಾರೆ. “ಅವರ ಜನ್ಮದಿನದ ಸಂದರ್ಭದಲ್ಲಿ, ನಾನು ಎಲ್.ಕೆ. ಅಡ್ವಾಣಿ ಜಿ ಅವರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಈ ವರ್ಷ ಬಹಳ ವಿಶೇಷವಾಗಿದೆ. ಏಕೆಂದರೆ ಅವರಿಗೆ ರಾಷ್ಟ್ರಕ್ಕೆ ಅವರ ಅಸಾಧಾರಣ ಸೇವೆಗಾಗಿ ಭಾರತ ರತ್ನವನ್ನು ನೀಡಲಾಯಿತು” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.