ಬೆಂಗಳೂರು: KUWJ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಅವರ ಹುಟ್ಟೂರಾದ ಕೋಲಾರ ಜಿಲ್ಲೆ ಚೌಡದೇವನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ,
ಮತಗಟ್ಟೆಗೆ ಮೊಬೈಲ್ ಫೋನ್ ತೆಗೆದುಕೊಂಡು ಹೋಗುತ್ತಿದ್ದೀರಾ!?.. ಹಾಗಿದ್ರೆ ಈ ಸುದ್ದಿ ಓದಿ!
ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಕೆಲಸ ಮಾಡಿದ್ದರು. ತನಿಖಾ ವರದಿಗಳಿಗೂ ಹೆಸರುವಾಸ. ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿಯೂ ಅತ್ಯುತ್ತಮವಾಗಿ ಕೆಲಸ ಮಾಡಿದ್ದರು. ಪತ್ರಕರ್ತರ ಸಂಘಟನೆ, ಕ್ಷೇಮಾಭಿವೃದ್ದಿ ವಿಚಾರದಲ್ಲೂ ಸಾಕಷ್ಟು ಚಟುವಟಿಕೆಗಳನ್ನು ರೂಪಿಸಿ ಗಮನ ಸೆಳೆದಿದ್ದರು. ಹಲವಾರು ಪ್ರಶಸ್ತಿಗಳೂ ಅವರಿಗೆ ಬಂದಿದ್ದವು.