ಚಾಮರಾಜನಗರ:- ಬಿಜೆಪಿ ಸೋಲಿಗೆ ಹಿರಿಯ ನಾಯಕರೇ ಕಾರಣ ಎಂದು ಬಿವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲಲು ಹಿರಿಯ ನಾಯಕರು ನಾನು, ನಾನು ಎಂದದ್ದೇ ಕಾರಣವಾಯಿತು. ಹಿರಿಯ ನಾಯಕರು ಚುನಾವಣೆಗೆ ಮುನ್ನ ನಾವು ಎನ್ನುತ್ತಾರೆ, ಚುನಾವಣೆ ಗೆದ್ದ ಬಳಿಕ ನಾನು, ನಾನು ಎನ್ನುತ್ತಾರೆ.
ಅದನ್ನು ಬಿಟ್ಟು, ನಾವೆಲ್ಲರೂ ಒಂದೇ ಎಂದು ತಿಳಿದುಕೊಂಡಿದ್ದರೇ ಚುನಾವಣೆಯಲ್ಲಿ ಸೋಲುತ್ತಿರಲಿಲ್ಲ, ಕಳೆದ ವಿಧಾನಸಭಾ ಚುನಾವಣೆ ಸೋಲಿಗೆ ಬಿಜೆಪಿ ಕಾರಣವಲ್ಲ, ಕಾರ್ಯಕರ್ತರು ಕಾರಣವಲ್ಲ, ನಾಯಕರು ಕಾರಣ ಎಂದು ಗುಡುಗಿದರು.
ರಾಜ್ಯ ಬಿಜೆಪಿ ಅಧ್ಯಕ್ಷನಾದ ಬಳಿಕ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಬಿಎಸ್ವೈ ನನಗೆ ಒಂದು ಮಾತು ಹೇಳಿದ್ದಾರೆ, ರಾಜ್ಯದಲ್ಲಿ ಅನೇಕ ಹಿರಿಯ ನಾಯಕರು ಇದ್ದರೂ ಪಕ್ಷ ನಿನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದೆ, ಒಂದು ದಿನ ನೀನು ಮನೆಯಲ್ಲಿ ಕೂರಬಾರದು. ಲೋಕಭೆಯಲ್ಲಿ 28 ಕ್ಷೇತ್ರವನ್ನೂ ಗೆಲ್ಲಬೇಕು ಎಂದಿದ್ದಾರೆ, ಅವರೂ ಕೂಡ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಿದರು.
ದೇಶದಲ್ಲಿ ಮನಮೋಹನ್ ಸಿಂಗ್ ಆಡಳಿತ ಇದ್ದಾಗ ಭ್ರಷ್ಟಾಚಾರ ನಡೆಯುತ್ತಿತ್ತು. ಇದೀಗ ದೇಶದ ಆಡಳಿತದಲ್ಲಿ ಇಂದು ಭ್ರಷ್ಟಾಚಾರ ಒಂದೂ ಆರೋಪ ಇಲ್ಲ. ನರೇಂದ್ರ ಮೋದಿ ಮತ್ತೆ ಪ್ರಧಾನ ಮಂತ್ರಿ ಆಗುವುದನ್ನು ಯಾವ ದುಷ್ಟ ಶಕ್ತಿಯು ತಡೆಯುದಕ್ಕೆ ಆಗಲ್ಲ, ಕಾಂಗ್ರೆಸ್ ಗೂ ಇದು ಮನದಟ್ಟಾಗಿದ್ದು ಹತಾಶೆ ಹೇಳಿಕೆ ಕೊಡುತ್ತಿದ್ದಾರೆ ಎಂದರು.