ದಕ್ಷಿಣ ಕನ್ನಡ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಳಿ ಸರಣಿ ಅಪಘಾತ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಅವಘಡ ಸಂಭವಿಸಿದೆ. ಖಾಸಗಿ ಬಸ್, ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಸರಣಿ ಅಪಘಾತ ಸಣಭವಿಸಿದ್ದು, ಅಪಘಾತದಲ್ಲಿ ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರ ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿದ್ದು, ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಹಿಂದಿನಿಂದ ಬರ್ತಿದ್ದ ಕಾರು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದ್ದು, ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಸರಣಿ ಅಪಘಾತ
By AIN Admin