ಬೆಳಗಾವಿ:- ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಕೇಸ್ ಮುಂದುವರಿದಿದ್ದು, ಬೆಳಗಾವಿ ಬಿಮ್ಸ್ ನಲ್ಲಿ ಮತ್ತೊಂದು ದುರಂತ ಸಂಭವಿಸಿದೆ.
ಘಾಟಿ ದನಗಳ ಜಾತ್ರೆ ಆರಂಭ: ಹಸಿದವರಿಗೆ ಊಟದ ವ್ಯವಸ್ಥೆ ಕಲ್ಪಿಸಿದ ಬೆಂ.ಗ್ರಾ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪ್ರತಾಪ್..!
ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದೆ. ಹುಕ್ಕೇರಿ ತಾಲೂಕಿನ ಗೌಡವಾಡದ ವೈಶಾಲಿ ಕೊಟಬಾಗಿ ಅವರಿಗೆ 4 ದಿನಗಳ ಹಿಂದಷ್ಟೇ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಹುಕ್ಕೇರಿ ತಾಲೂಕು ಆಸ್ಪತ್ರೆಗೆ ಕರೆತಂದಿದ್ದರು. ಅಲ್ಲಿ ವೈದ್ಯರಿಲ್ಲ ಎಂದು ಬೆಳಗಾವಿ ಬಿಮ್ಸ್ಗೆ ಸ್ಥಳಾಂತರ ಮಾಡಿದ್ದರು. ಶನಿವಾರ ಬೆಳಗ್ಗೆ ಬಿಮ್ಸ್ನಲ್ಲಿ ವೈಶಾಲಿಗೆ ಸಿಜೇರಿಯನ್ ಆಗಿದ್ದು, ಹೆಣ್ಣು ಮಗುವಿಗೆ ಜನ್ಮಕೊಟ್ಟಿದ್ದಾರೆ
ಬಳಿಕ ವೈಶಾಲಿ ಆರೋಗ್ಯವಾಗಿ ಇದ್ದರು ಎನ್ನಲಾಗಿದೆ. ಆದರೆ ಭಾನುವಾರ ಬೆಳಗ್ಗೆ ವೈಶಾಲಿಗೆ ಎದೆನೋವು ಕಾಣಿಸಿಕೊಂಡಿದ್ದು, ಐಸಿಯುಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ವೈಶಾಲಿ ಮೃತಪಟ್ಟಿದ್ದಾರೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬದವರು ದೂರಿದ್ದಾರೆ.
ಚೊಚ್ಚಲ ಹೆರಿಗೆ ಖುಷಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಈಗ ಏಕಾಏಕಿ ವೈಶಾಲಿ ಮೃತಪಟ್ಟಿರುವುದರಿಂದ, ರೊಚ್ಚಿಗೆದ್ದ ಕುಟುಂಬದವರು ಮೃತ ಬಾಣಂತಿ ಶವವನ್ನು ಪೋಸ್ಟ್ಮಾರ್ಟಂಗೆ ಕೊಟ್ಟಿರಲಿಲ್ಲ. ನಂತರ ಬಿಮ್ಸ್ ಆಸ್ಪತ್ರೆ ಸಿಬ್ಬಂದಿ ಎಂಎಲ್ಸಿ ಮಾಡಿಸಿ, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಮರಣೋತ್ತರ ಪರೀಕ್ಷೆ ನಡೆಸಿ ಬಾಣಂತಿ ಶವ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದಲ್ಲಿ ವೈಶಾಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.